ಜಂಡೇವಾಲನ್ ಮೆಟ್ರೋ ಟ್ರ್ಯಾಕ್‌ನಲ್ಲಿ ಮಹಿಳೆ ಶವವಾಗಿ ಪತ್ತೆ

ಸುಮಾರು 40 ವರ್ಷದ ಅಪರಿಚಿತ ಮಹಿಳೆ ದೆಹಲಿಯ ಮೆಟ್ರೋ ಟ್ರ್ಯಾಕ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Last Updated : Sep 2, 2019, 12:18 PM IST
ಜಂಡೇವಾಲನ್ ಮೆಟ್ರೋ ಟ್ರ್ಯಾಕ್‌ನಲ್ಲಿ ಮಹಿಳೆ ಶವವಾಗಿ ಪತ್ತೆ title=
Representational image

ನವದೆಹಲಿ: ಸೋಮವಾರ ಬೆಳಿಗ್ಗೆ 8: 50 ಕ್ಕೆ ದೆಹಲಿಯ ಜಂಡೇವಾಲನ್ ಮೆಟ್ರೋ ನಿಲ್ದಾಣದ ಬಳಿ ಮೆಟ್ರೋ ಟ್ರ್ಯಾಕ್‌ನಲ್ಲಿ ಮಹಿಳೆಯೊಬ್ಬರು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ರಾಜಾ ಗಾರ್ಡನ್ ಮೆಟ್ರೋ ಪೊಲೀಸ್ ಠಾಣೆಗೆ  ಪಿಸಿಆರ್ ಕರೆ ಬಂದಿದೆ.

ಪೊಲೀಸ್ ತಂಡವು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ ಬಳಿಕ, ಸುಮಾರು 40 ವರ್ಷದ ಅಪರಿಚಿತ ಮಹಿಳೆಯೊಬ್ಬರು ಮೆಟ್ರೋ ಟ್ರ್ಯಾಕ್‌ನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆರಂಭಿಕ ವಿಚಾರಣೆಯಲ್ಲಿ, ಚಾಲನೆಯಲ್ಲಿರುವ ಮೆಟ್ರೋ ಮುಂದೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಮೃತ ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯ ಮೃತ ದೇಹವನ್ನು ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಈ ಹಿಂದೆ ಸೋಮವಾರ ದೆಹಲಿ ಮೆಟ್ರೋ ರೈಲು ನಿಗಮವು ಜಂಡೇವಾಲನ್‌ನಲ್ಲಿ ಹಳಿಗಳಲ್ಲಿ ಪ್ರಯಾಣಿಕರು ಪತ್ತೆಯಾದ ಕಾರಣ ಇಂದ್ರಪ್ರಸ್ಥ ಮತ್ತು ಕೀರ್ತಿ ನಗರ ನಡುವಿನ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಟ್ವೀಟ್ ಮಾಡಿತ್ತು.

Trending News