ನವದೆಹಲಿ: Uniform Civil Code -  ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ರಾಜ್ಯದ ಬಿಜೆಪಿ ಸರ್ಕಾರ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಪುಷ್ಕರ್ ಸಿಂಗ್ ಧಾಮಿ (Uttarakhand CM) ಸರ್ಕಾರವು ಇಂದು ನಡೆದ ಸಭೆಯಲ್ಲಿ Uniform Civil Code  ಅಂದರೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದೆ.


'ರಾಷ್ಟ್ರೀಯ ಭದ್ರತೆ ನಿರ್ವಹಣೆಯಲ್ಲಿ ಕೇಂದ್ರದ ಸಹಾಯ ಅಗತ್ಯ'


COMMERCIAL BREAK
SCROLL TO CONTINUE READING

ಸಾರ್ವಜನಿಕರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ಧಾಮಿ ಸರ್ಕಾರ
ಈ ಕುರಿತು ಮಾತನಾಡಿರುವ ಸಿಎಂ ಧಾಮಿ, '2022ರ ಫೆಬ್ರವರಿ 12ರಂದು ರಾಜ್ಯದಲ್ಲಿ ನಮ್ಮ ಸರ್ಕಾರ ರಚನೆಯಾದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವೆವು ಎಂದು ನಾವು ಸಾರ್ವಜನಿಕರಿಗೆ ಭರವಸೆ ನೀಡಿದ್ದೆವು. ಇಂದು ನಾವು ಅದನ್ನು ಶೀಘ್ರದಲ್ಲೇ ಜಾರಿಗೆ ತರಲು ನಿರ್ಧರಿಸಿದ್ದೇವೆ. ಇದಕ್ಕಾಗಿ ಉನ್ನತ ಮಟ್ಟದ ಸಮಿತಿ ರಚಿಸಲಿದ್ದೇವೆ. ಸಮಿತಿ ಈ ಕಾನೂನಿನ ಕರಡನ್ನು ಸಿದ್ಧಪಡಿಸಲಿದೆ ಮತ್ತು ನಮ್ಮ ಸರ್ಕಾರ ಅದನ್ನು ಜಾರಿಗೆ ತರಲಿದೆ' ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವಂತೆ ಅವರು ದೇಶದ ಇತರ ರಾಜ್ಯಗಳಿಗೂ ಕೂಡ ಮನವಿ ಮಾಡಿದ್ದಾರೆ.


ಇದನ್ನೂ ಓದಿ-PM Kisan ರೈತರಿಗೆ ಪ್ರತಿ ವರ್ಷ ₹6000 ದೊಂದಿಗೆ ₹36000 ಸಿಗುತ್ತದೆ, ಹೀಗೆ ಇದರ ಲಾಭ ಪಡೆಯಿರಿ

ಏಕರೂಪ ನಾಗರಿಕ ಸಂಹಿತೆ ಅಥವಾ ಯುನಿಫಾರ್ಮ್ ಸಿವಿಲ್ ಕೋಡ್ ಎಂದರೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಏಕರೂಪ ನಾಗರಿಕ ಸಂಹಿತೆ ಎಂದರೆ ಎಲ್ಲಾ ನಾಗರಿಕರಿಗೆ ಏಕರೂಪದ ಕಾನೂನು ಎಂದರ್ಥ. ಯಾವುದೇ ಧರ್ಮ ಅಥವಾ ಜಾತಿಗೆ ಪ್ರತ್ಯೇಕ ಕಾನೂನು ಇರುವುದಿಲ್ಲ. ಏಕರೂಪ ನಾಗರಿಕ ಸಂಹಿತೆ ಜಾರಿಯಾದ ನಂತರ ಪ್ರತಿಯೊಂದು ಧರ್ಮದ ಜನರು ಒಂದೇ ಕಾನೂನಿನ ವ್ಯಾಪ್ತಿಗೆ ಬರುತ್ತಾರೆ. ಇದೀಗ ದೇಶದ ಪ್ರತಿಯೊಂದು ಧರ್ಮದ ಜನರು ತಮ್ಮ ವೈಯಕ್ತಿಕ ಕಾನೂನುಗಳ ಪ್ರಕಾರ ಮದುವೆ, ವಿಚ್ಛೇದನ, ಆಸ್ತಿ ಹಂಚಿಕೆ ಮತ್ತು ಮಕ್ಕಳ ದತ್ತು ಮುಂತಾದ ವಿಷಯಗಳನ್ನು ಇತ್ಯರ್ಥಪಡಿಸುತ್ತಾರೆ. ಆದರೆ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದ ನಂತರ ಎಲ್ಲಾ ಧರ್ಮಗಳು ಒಂದೇ ಕಾನೂನನ್ನು ಅನುಸರಿಸಬೇಕಾಗಲಿದೆ. ದೇಶದಲ್ಲಿ ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿಗಳಿಗೆ ವೈಯಕ್ತಿಕ ಕಾನೂನು ಇದೆ ಎಂಬುದು ಇಲ್ಲಿ ಉಲ್ಲೇಖನೀಯ. ಇದೇ ವೇಳೆ ಹಿಂದೂಗಳು, ಸಿಖ್ಖರು, ಜೈನರು ಮತ್ತು ಬೌದ್ಧರು ಹಿಂದೂ ನಾಗರಿಕ ಕಾನೂನಿನ ಅಡಿಯಲ್ಲಿ ಬರುತ್ತಾರೆ. ಸಂವಿಧಾನದಲ್ಲಿ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನವನ್ನು ಆರ್ಟಿಕಲ್ 44ರ ಅಡಿಯಲ್ಲಿ ರಾಜ್ಯದ ಜವಾಬ್ದಾರಿ ಎಂದು ವಿವರಿಸಲಾಗಿದೆ. ಇದು ಇನ್ನೂ ದೇಶದಲ್ಲಿ ಎಲ್ಲಿಯೂ ಜಾರಿಯಾಗಿಲ್ಲ. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ರಾಜ್ಯ ಪಾತ್ರವಾಗಲಿದೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.