ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ನಿರ್ಧಾರ : ಕೃಷಿ ಕಾನೂನು ಹಿಂಪಡೆಯಲು ಸಂಪುಟ ಅನುಮೋದನೆ!
ನವೆಂಬರ್ 29ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕಾನೂನುಗಳನ್ನು ಅಧಿಕೃತವಾಗಿ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಇದಕ್ಕಾಗಿ ಸರ್ಕಾರ ಮಸೂದೆ ತರಲಿದೆ.
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ (ನ.24) ನಡೆದ ಸಭೆಯಲ್ಲಿ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಕೃಷಿ ಕಾಯ್ದೆ ಹಿಂಪಡೆಯುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇದಾದ ಬಳಿಕ ನವೆಂಬರ್ 29ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕಾನೂನುಗಳನ್ನು ಅಧಿಕೃತವಾಗಿ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಇದಕ್ಕಾಗಿ ಸರ್ಕಾರ ಮಸೂದೆ ತರಲಿದೆ.
ಕಾನೂನನ್ನು ಹಿಂಪಡೆಯುವುದಾಗಿ ಹೇಳಿದ್ದ ಪ್ರಧಾನಿ ಮೋದಿ
ನವೆಂಬರ್ 19 ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು ಎಂದು ತಿಳಿಸೋಣ. ಇದರೊಂದಿಗೆ, ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಮನೆಗೆ ಹಿಂತಿರುಗುವಂತೆ ಪ್ರಧಾನಿ ಮೋದಿ ಮನವಿ ಮಾಡಿದರು ಮತ್ತು ಎಂಎಸ್‌ಪಿ ಪರಿಣಾಮಕಾರಿ ಮತ್ತು ಪಾರದರ್ಶಕಗೊಳಿಸಲು ಸಮಿತಿಯನ್ನು ರಚಿಸುವುದಾಗಿ ಘೋಷಿಸಿದರು.
ಇದನ್ನೂ ಓದಿ : LPG Subsidy Updates: ಅಡುಗೆ ಅನಿಲ ಸಬ್ಸಿಡಿ ಪಡೆಯಲು ತಕ್ಷಣ ಈ ಕೆಲಸ ಮಾಡಿ..!
ಪ್ರಧಾನಿ ನರೇಂದ್ರ ಮೋದಿ ಅವರು, 'ಎಂಎಸ್‌ಪಿ(MSP)ಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕಗೊಳಿಸಲು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಂತಹ ಎಲ್ಲಾ ವಿಷಯಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿಯಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು, ರೈತರು, ಕೃಷಿ ವಿಜ್ಞಾನಿಗಳು, ಕೃಷಿ ಅರ್ಥಶಾಸ್ತ್ರಜ್ಞರ ಪ್ರತಿನಿಧಿಗಳು ಇರುತ್ತಾರೆ.
ರೈತರ ಚಳವಳಿ ಈಗ ಮುಗಿಯುವುದೇ?
ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ(Agriculture Laws Repeal) ಪ್ರಧಾನಿ ಮೋದಿ ಘೋಷಿಸಿದ ನಂತರವೂ ರೈತ ಸಂಘಟನೆಗಳು ಪ್ರತಿಭಟನೆಯನ್ನು ಹಿಂಪಡೆಯದಿರಲು ನಿರ್ಧರಿಸಿವೆ ಮತ್ತು ಸಂಸತ್ತಿನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಹೇಳಿವೆ. ಕೃಷಿ ಕಾನೂನು ಹಿಂಪಡೆಯುವ ಪ್ರಸ್ತಾವನೆಗೆ ಮೋದಿ ಸಂಪುಟ ಒಪ್ಪಿಗೆ ನೀಡಿದ ನಂತರ ರೈತರ ಚಳವಳಿ ಕೊನೆಗೊಳ್ಳಲಿದೆಯೇ ಎಂಬುದು ಈಗ ಪ್ರಶ್ನೆಯಾಗಿದೆ.
ಇದನ್ನೂ ಓದಿ : PM Awas ಯೋಜನೆ ಅಡಿಯಲ್ಲಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ, ತಕ್ಷಣವೇ ಅರ್ಜಿ ಸಲ್ಲಿಸಿ
ಒಂದು ವರ್ಷದಿಂದ ಧರಣಿ ಕುಳಿತ ರೈತರು
ಹೊಸ ಕೃಷಿ ಕಾನೂನುಗಳ(New Agriculture Laws) ವಿರುದ್ಧ ಒಂದು ವರ್ಷಕ್ಕೂ ಹೆಚ್ಚು ಕಾಲ ರೈತರ ಪ್ರತಿಭಟನೆ ನಡೆಯುತ್ತಿದ್ದು, ರೈತರು ದೆಹಲಿಯ ಗಡಿಯಲ್ಲಿಯೇ ಉಳಿದುಕೊಂಡಿದ್ದಾರೆ. ಈ ಹಿಂದೆ ಸರ್ಕಾರ ಕಾನೂನು ಬದಲಾವಣೆಗಳನ್ನು ಘೋಷಿಸಿತ್ತು. ಈ ಕುರಿತು ಸರಕಾರ ಹಾಗೂ ರೈತರ ನಡುವೆ ಹಲವು ಸುತ್ತಿನ ಮಾತುಕತೆ ನಡೆದರೂ ಪರಿಹಾರ ಸಿಕ್ಕಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.