ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆ 31 ರಿಂದ 34 ಕ್ಕೆ ಏರಿಕೆ ಮಾಡುವ ಮಸೂದೆಯನ್ನು ಬುಧವಾರ ಕೇಂದ್ರೀಯ ಕ್ಯಾಬಿನೆಟ್ ಅಂಗೀಕರಿಸಿದೆ. 


COMMERCIAL BREAK
SCROLL TO CONTINUE READING

ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರತುಪಡಿಸಿ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು 31 ರಿಂದ 34ಕ್ಕೆ ಹೆಚ್ಚಿಸಲು ಸಿಜೆಐ ರಂಜನ್ ಗೊಗೊಯ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರಬರೆದಿದ್ದ ಬೆನ್ನಲ್ಲೇ ಕ್ಯಾಬಿನೆಟ್ ಈ ನಿರ್ಧಾರ ಕೈಗೊಂಡಿದೆ. 


2009 ರಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು 26 ರಿಂದ 31ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಪರಿಗಣಿಸಿದರೆ ಈ ಸಂಖ್ಯೆ ಕಡಿಮೆ ಎನಿಸುತ್ತದೆ. ಸುಪ್ರೀಂ ಕೋರ್ಟ್‌ನಲ್ಲಿಯೇ 58,000 ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಎಂದು ಸಿಜೆಐ ಗೊಗೊಯ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರಲ್ಲದೆ, ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಿಸುವುದರಿಂದ ಬಾಕಿ ಉಳಿಯುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಅವರು ಹೇಳಿದ್ದರು.