ನವದೆಹಲಿ: ಭಾರತದಲ್ಲಿ ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವ ಸುಗ್ರಿವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ಸೂಚಿಸಿದೆ. 


COMMERCIAL BREAK
SCROLL TO CONTINUE READING

ಕಳೆದ ವರ್ಷ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಒಪ್ಪಿಗೆ ಸಿಕ್ಕಿತ್ತು. ಆದರೆ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ಸಿಕ್ಕಿರಲಿಲ್ಲ. ತುರ್ತಾಗಿ ನೀಡುವ ತ್ರಿವಳಿ ತಲಾಖ್ ಕಾನೂನು ಬಾಹಿರ ಮತ್ತು ಅಸಾಂವಿಧಾನಿಕ ಎಂದು ಕಳೆದ ವರ್ಷ ಆಗಸ್ಟ್‌ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿ, ಕೇಂದ್ರ ಸರ್ಕಾರಕ್ಕೆ ಹೊಸ ಕಾಯ್ದೆ ರಚಿಸಲು ಸೂಚನೆ ನೀಡಿತ್ತು. ಸುಪ್ರೀಂ ಆದೇಶದಂತೆ ಕೇಂದ್ರ ಈಗ ಸುಗ್ರೀವಾಜ್ಞೆ ಹೊರಡಿಸಿತ್ತು. ಆದರೆ ಕೇಂದ್ರ ಸಂಪುಟದಿಂದ ಇದಕ್ಕೆ ಒಪ್ಪಿಗೆ ಸಿಕ್ಕಿರಲಿಲ್ಲ. ಆದರೆ ಇಂದು ನಡೆದ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರವೇ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಸಂಪುಟ ಸಭೆ ಅಸ್ತು ಎಂದಿದೆ.


ತ್ರಿವಳಿ ತಲಾಖ್ ನೀಡುವ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ ನೀಡಬಹುದು. ಮುಸ್ಲಿಂ ಮಹಿಳೆಯ ವಿವಾಹ ಹಕ್ಕುಗಳ ರಕ್ಷಣೆ ಮಸೂದೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಆತಂಕ ಮತ್ತು ತೀವ್ರ ವಿರೋಧ ವ್ಯಕ್ತಪಡಿಸಿ ತಿದ್ದುಪಡಿಗೆ ಒತ್ತಾಯಿಸಿದ್ದವು.