ನವ ದೆಹಲಿ: ಮುಸ್ಲಿಂ ಸಮುದಾಯದ ಮಹಿಳೆಯರ ಬಹು ನಿರೀಕ್ಷಿತ ತ್ರಿವಳಿ ತಲಾಖ್ ಅನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಹೊಸ ಕಾಯಿದೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 


COMMERCIAL BREAK
SCROLL TO CONTINUE READING

ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ  ತ್ರಿವಳಿ ತಲಾಖ್ ಕುರಿತ ಮಸೂದೆಗೆ ಸಂಪುಟ ಅಂಗೀಕಾರ ನೀಡಿದೆ. 


ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗುವ ಮೊದಲು ಸಂಪುಟದ ಅಂಗೀಕಾರ ಪಡೆಯಯುವ ಅಗತ್ಯವಿದ್ದರಿಂದ ಪ್ರಧಾನಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. 


ಮುಸ್ಲಿಂ ಸಮುದಾಯದಲ್ಲಿ ಜಾರಿ ಇರುವ ವಿವಾಹ ವಿಚ್ಛೇದನ ಪದ್ಧತಿಯಾದ ತ್ರಿವಳಿ ತಲಾಖ್ ಅನ್ನು ಆರು ತಿಂಗಳ ಕಾಲ ನಿಷೇಧಿಸಿದ್ದ ಸುಪ್ರೀಂ ಕೋರ್ಟ್, ಈ ಸಂಬಂಧ ಶಾಸನ ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. 


ಈ ಹಿನ್ನೆಲೆಯಲ್ಲಿ ಕೇಂದ್ರ ಸಮಿತಿ ಸಿದ್ಧಪಡಿಸಿದ್ದ ತ್ರಿವಳಿ ತಲಾಕ್ ಮಸೂದೆಗೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ.