ನವದೆಹಲಿ: ಅಸ್ಸಾಂನ ನಾಗರಿಕರ ರಾಷ್ಟ್ರೀಯ ನೋಂದಣಿ(NRC) ಕರಡು ವಿಚಾರ ರಾಷ್ಟ್ರಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಕ್ಯಾಬಿನೆಟ್ ಸಭೆ ನಡೆಯಲಿದೆ. 


COMMERCIAL BREAK
SCROLL TO CONTINUE READING

ಎನ್ಆರ್ಸಿ ಪಟ್ಟಿಯಲ್ಲಿರುವ 40 ಲಕ್ಷ ಜನರ ನಾಗರಿಕತೆ ಬಗ್ಗೆ ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ನಂತರ ಲೋಕಸಭೆಯಲ್ಲಿಯೂ ಈ ವಿಚಾರ ಚರ್ಚೆಗೆ ಒಳಪಡಲಿದೆ ಎನ್ನಲಾಗಿದೆ. ಇದನ್ನು ಹೊರತುಪಡಿಸಿ, ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಅಗತ್ಯವಿದೆಯೇ ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೆ, ಅಸ್ಸಾಂನಲ್ಲಿ ಮರಾಠ ಆಂದೋಲನ ಸೇರಿದಂತೆ ಮಹಾರಾಷ್ಟ್ರದ ಮಿಸಲಾತಿ ಹೋರಾಟದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.


ರೈತರ ವಿಷಯದ ಬಗ್ಗೆ ಚರ್ಚೆ
ಇಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯವಾಗಿ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ವಿಶೇಷ ಯೋಜನೆ ಜಾರಿಮಾಡುವ ಸಂಬಂಧ ಚರ್ಚಿಸಲಾಗುತ್ತದೆ ಎನ್ನಲಾಗಿದೆ. ಉತ್ತರ ಪ್ರದೇಶದ ರೈತರ ಸಮಸ್ಯೆಗಳನ್ನೂ ಸಹ ಸಭೆಯಲ್ಲಿ ಚರ್ಚಿಸಲಾಗುವುದು. ಜತೆಗೆ ಬಹುದು ಎನ್ನಲಾಗಿದೆ.  ಈ ಸಭೆ ಚರ್ಚಿಸಬಹುದು ಎಂದು ಮೂಲಗಳು ಹೇಳಿವೆ. ಇದರೊಂದಿಗೆ, ಮುಂಗಾರು ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾಗದ ಹಲವು ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. 


ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸುಮಾರು 8000 ಕೋಟಿ ರೂ. ಗಳ ಪ್ಯಾಕೇಜ್ ಅನ್ನು ಅನುಮೋದಿಸಲಾಗಿತ್ತು.