ನವದೆಹಲಿ: ಅನಾರೋಗ್ಯ ಹಿನ್ನೆಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಬೆಳಗ್ಗೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ಗೆ ದಾಖಲಾಗಿದ್ದಾರೆ. 


COMMERCIAL BREAK
SCROLL TO CONTINUE READING

ಮೂಲಗಳ ಪ್ರಕಾರ, ಹಣಕಾಸು ಸಚಿವರನ್ನು ಸೋಮವಾರ ಮಧ್ಯಾಹ್ನ 12ಗಂಟೆಗೆ ಏಮ್ಸ್‌ನ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. 63 ವರ್ಷದ ಸೀತಾರಾಮನ್ ಅವರು ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: Kamal Haasan : ಹಿಂದಿ ಹೇರಿಕೆ ವಿರುದ್ಧ ಗುಡುಗಿದ ನಟ ಕಮಲ್ ಹಾಸನ್


ಕೇಂದ್ರ ಹಣಕಾಸು ಸಚಿವರನ್ನು ನಿತ್ಯದ ತಪಾಸಣೆಗಾಗಿ ಏಮ್ಸ್‌ಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ನಿರ್ಮಲಾ ಸೀತಾರಾಮನ್ ಅವರು ಹೊಟ್ಟೆಯಲ್ಲಿ ಸೌಮ್ಯ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. ನಾವು ಅವರಿಗೆ ಅಗತ್ಯ ಚಿಕಿತ್ಸೆ ನೀಡುತ್ತಿದ್ದೇವೆ. ಚೇತರಿಸಿಕೊಂಡ ಬಳಿಕ ಶೀಘ್ರವೇ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುತ್ತೇವೆಂದು ಹಿರಿಯ ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.


ಇದನ್ನೂ ಓದಿ: Ranu Mondal Video : ರಾನು ಮಂಡಲ್ ಹೊಸ ವಿಡಿಯೋ ವೈರಲ್‌, ಹಾಡು ಕೇಳಿ ದಂಗಾದ ನೆಟ್ಟಿಗರು


ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಆದರೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲಾಗಿದ್ದು ಏಕೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ಈವರೆಗೂ ಲಭ್ಯವಾಗಿಲ್ಲ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.