ಶೇ.10ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದ ಆದೇಶ
ಇತ್ತೀಚೆಗಷ್ಟೇ ಮೇಲ್ಜಾತಿಯಲ್ಲಿ ಬಡವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ನೀಡಿರುವ ಶೇ.10 ರಷ್ಟು ಮೀಸಲಾತಿ ಪ್ರಮಾಣವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ.
ಪುಣೆ: ಇತ್ತೀಚೆಗಷ್ಟೇ ಮೇಲ್ಜಾತಿಯಲ್ಲಿ ಬಡವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ನೀಡಿರುವ ಶೇ.10 ರಷ್ಟು ಮೀಸಲಾತಿ ಪ್ರಮಾಣವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ.
ಪುಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ ಜಾವಡೆಕರ್ "ಸರ್ಕಾರ ಈಗಾಗಲೇ ಶೇ.10 ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಮನವಿ ಮಾಡಿಕೊಂಡಿದೆ.ನಾವು ನಿನ್ನದೆ ಎಲ್ಲ ಸಂಸ್ಥೆಗಳು ಮತ್ತು ವಿವಿಗಳಿಗೆ ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಮೀಸಲಾತಿಯಲ್ಲಿ ಜಾರಿಗೆ ತರಲು ಆದೆಶಿಸಿದ್ದೇವೆ,ಅದೇ ರೀತಿ ನಾವು ರಾಜ್ಯಗಳಲ್ಲಿಯೂ ಕೂಡ ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಇತ್ತೀಚಿಗೆ 124ನೇ ಸಂವಿಧಾನಿಕ ತಿದ್ದುಪಡಿಯ ಮೂಲಕ ಶಿಕ್ಷಣ ಮತ್ತು ಸರ್ಕಾರ ಉದ್ಯೋಗಗಳಲ್ಲಿ ಮೇಲ್ಜಾತಿಯ ಬಡವರಿಗೆ ಮೀಸಲಾತಿಯನ್ನು ನೀಡಲು ಕಾಯ್ದೆಯನ್ನು ಜಾರಿಗೆ ತರಬೇಕೆಂದು ಆದೇಶ ನೀಡಿತ್ತು.ಈ ಹಿನ್ನಲೆಯಲ್ಲಿ ಈಗ ಸರ್ಕಾರ ಈ ಕಾಯ್ದೆಯನ್ನು ಜಾರಿಗೆ ತರಲು ಕೇಳಿಕೊಂಡಿದೆ.