ನವದೆಹಲಿ: ಸಿಎಎ ಅಂದರೆ ಪೌರತ್ವ ತಿದ್ದುಪಡಿ ಕಾಯ್ದೆ ದೇಶದಲ್ಲಿ ಜಾರಿಗೆ ಬಂದಿದೆ. ಈ ಬಗ್ಗೆ ನಡೆಯುತ್ತಿರುವ ರಾಜಕೀಯದ ನಡುವೆ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಎಂದಿಗೂ ಹಿಂಪಡೆಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಸಿಎಎ ಕಾನೂನನ್ನು ಎಂದಿಗೂ ಹಿಂಪಡೆಯುವುದಿಲ್ಲ. ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಸಾರ್ವಭೌಮ ಹಕ್ಕು. ಅದರೊಂದಿಗೆ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪೌರತ್ವ (ತಿದ್ದುಪಡಿ) ಕಾಯ್ದೆಯಲ್ಲಿ ಯಾರ ಪೌರತ್ವವನ್ನು ಕಸಿದುಕೊಳ್ಳಲು ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂದು ಹೇಳಿದ್ದಾರೆ.
ಸಿಎಎ ಮೂಲಕ ಬಿಜೆಪಿ ಹೊಸ ವೋಟ್ ಬ್ಯಾಂಕ್ ಸೃಷ್ಟಿಸುತ್ತಿದೆ ಎಂಬ ವಿಪಕ್ಷಗಳ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದು, 'ವಿಪಕ್ಷಗಳಿಗೆ ಬೇರೆ ಕೆಲಸವಿಲ್ಲ. ಅವರು ಹೇಳಿದ್ದನ್ನು ಮಾಡದಿರುವುದು ಅವರ ಇತಿಹಾಸ. ನರೇಂದ್ರ ಮೋದಿಯವರು ಹೇಳಿದ್ದಕ್ಕೆ ಕಲ್ಲು ಹಾಕುತ್ತಾರೆ. ಪ್ರಧಾನಿ ಮೋದಿಯವರ ಪ್ರತಿಯೊಂದು ಗ್ಯಾರಂಟಿಯೂ ಈಡೇರಿದೆ. ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಗಳಲ್ಲಿ ರಾಜಕೀಯ ಲಾಭವಿದೆ ಎಂದರು, ಆದರೆ ಭಯೋತ್ಪಾದನೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಲ್ಲವೇ? 370ನೇ ವಿಧಿಯನ್ನು ತೆಗೆದುಹಾಕಿರುವುದು ನಮ್ಮ ರಾಜಕೀಯ ಲಾಭಕ್ಕಾಗಿ ಎಂದರು. 370ನೇ ವಿಧಿಯನ್ನು ತೆಗೆದುಹಾಕುತ್ತೇವೆ ಎಂದು 1950ರಿಂದಲೂ ಹೇಳುತ್ತಾ ಬಂದಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವವರಿಗೆ ಶೀಘ್ರವೇ ಸಹಾಯವಾಣಿ ಆರಂಭ: ಕೇಂದ್ರ ಗೃಹ ಸಚಿವಾಲಯ
ಬಿಜೆಪಿ ಅಲ್ಲಿ (ಪಶ್ಚಿಮ ಬಂಗಾಳ) ಅಧಿಕಾರಕ್ಕೆ ಬರುವ ಮತ್ತು ಒಳನುಸುಳುವಿಕೆಯನ್ನು ತಡೆಯುವ ದಿನ ದೂರವಿಲ್ಲ. ನೀವು ತುಷ್ಟೀಕರಣದ ರಾಜಕೀಯ ಮಾಡುವ ಮೂಲಕ ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಮಧ್ಯಪ್ರವೇಶಿಸುತ್ತೀರಿ. ನಿರಾಶ್ರಿತರಿಗೆ ಪೌರತ್ವ ನೀಡುವುದನ್ನು ವಿರೋಧಿಸಿದರೆ, ಸಾರ್ವಜನಿಕರು ನಿಮ್ಮೊಂದಿಗೆ ನಿಲ್ಲುವುದಿಲ್ಲ. ಮಮತಾ ಬ್ಯಾನರ್ಜಿ ಅವರಿಗೆ ಆಶ್ರಯ ಪಡೆಯುವ ವ್ಯಕ್ತಿ ಮತ್ತು ನುಸುಳುಕೋರನ ನಡುವಿನ ವ್ಯತ್ಯಾಸ ತಿಳಿದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ತಿರುಗೇಟು ನೀಡಿದರು.
ಭ್ರಷ್ಟಾಚಾರ ಬಯಲಿಗೆ ಬಂದ ಮೇಲೆ ದೆಹಲಿ ಮುಖ್ಯಮಂತ್ರಿ ತಾಳ್ಮೆ ಕಳೆದುಕೊಂಡಿದ್ದಾರೆ. ಇವರೆಲ್ಲ ಈಗಾಗಲೇ ಭಾರತಕ್ಕೆ ಬಂದು ನೆಲೆಸಿದ್ದಾರೆ ಎಂಬುದು ಅವರಿಗೆ ಗೊತ್ತಿಲ್ಲ. ಅವರಿಗೆ ಅಷ್ಟೊಂದು ಕಾಳಜಿ ಇದ್ದರೆ ಅವರು ಬಾಂಗ್ಲಾದೇಶಿ ನುಸುಳುಕೋರರ ಬಗ್ಗೆ ಏಕೆ ಮಾತನಾಡುವುದಿಲ್ಲ, ಯಾಕೆ ರೋಹಿಂಗ್ಯಾಗಳನ್ನು ವಿರೋಧಿಸುವುದಿಲ್ಲ? ಅವರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿಕೆಗೆ ಪ್ರತ್ಯುತ್ರ ನೀಡಿದರು.
ತಪ್ಪು ಮಾಹಿತಿಯಿಂದಾಗಿ ಅನೇಕರು ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಇಲ್ಲಿ ಅರ್ಜಿ ಸಲ್ಲಿಸಿದ ಮತ್ತು ನರೇಂದ್ರ ಮೋದಿ ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ ಎಲ್ಲರಿಗೂ ಪೌರತ್ವವನ್ನು ನೀಡಲಾಗುವುದು ಎಂದು ನಾನು ಭರವಸೆ ನೀಡಲು ಬಯಸುತ್ತೇನೆ ಎಂದರು.
ಈ ಕಾನೂನು ನಿಮ್ಮನ್ನು ನಿರಾಶ್ರಿತರೆಂದು ಒಪ್ಪಿಕೊಳ್ಳುವ ಅವಕಾಶ ನೀಡುತ್ತದೆ. ನೀವು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದರೆ, ನಿಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಇರುವುದಿಲ್ಲ. ಯಾರಿಗೂ ಭಯಪಡುವ ಅಗತ್ಯವಿಲ್ಲ ಎಂದರು.
ಇದನ್ನೂ ಓದಿ: Electoral Bonds: ಎಸ್ಬಿಐನ ಎಲೆಕ್ಟೋರಲ್ ಬಾಂಡ್ ಡೇಟಾದಿಂದ ಯಾವ ಮಾಹಿತಿ ಲಭ್ಯವಾಗುತ್ತೆ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.