Video: ಕಾಶ್ಮೀರದಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಕಾರಿಗೆ ಅಪಘಾತ
ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇದನ್ನೂ ಓದಿ: ಅಮೂಲ್ ವಿರುದ್ಧ ಕಿಡಿ, ಕನ್ನಡಿಗರಿಂದ ಸೇವ್ ನಂದಿನಿ ಅಭಿಯಾನ
ಜಮ್ಮುವಿನಿಂದ ಶ್ರೀನಗರಕ್ಕೆ ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರು ಸಣ್ಣ ಅಪಘಾತಕ್ಕೀಡಾಗಿದೆ ಎಂದು ರಾಂಬನ್ ಪೊಲೀಸರು ತಿಳಿಸಿದ್ದಾರೆ. "ಯಾರಿಗೂ ಯಾವುದೇ ಗಾಯಗಳಾಗಿಲ್ಲ ಮತ್ತು ಗೌರವಾನ್ವಿತ ಸಚಿವರನ್ನು ಗಮ್ಯಸ್ಥಾನಕ್ಕೆ ಸುರಕ್ಷಿತವಾಗಿ ಕಳಿಸಲಾಗಿದೆ" ಎಂದು ಪೊಲೀಸರು ಹೇಳಿದ್ದಾರೆ.ಮಾಧ್ಯಮಗಳಲ್ಲಿ ಪ್ರಚಾರದ ಪ್ರಸಾರಕ್ಕೆ ಅನುಮತಿ ಕಡ್ಡಾಯ: ಉಲ್ಲಂಘನೆ ಆದ್ರೆ ಕಾನೂನು ಕ್ರಮ
ಜಮ್ಮು ವಿಶ್ವವಿದ್ಯಾನಿಲಯದಲ್ಲಿ ಡೋಗ್ರಿ ಭಾಷೆಯಲ್ಲಿ ಭಾರತದ ಸಂವಿಧಾನದ ಮೊದಲ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಶನಿವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.