ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ
ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು.
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್(59) ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ, ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್, ಕ್ಯಾನ್ಸರ್ ನಿಂದ ಬಳಸುತ್ತಿದ್ದರು. ಅವರು ಕಳೆದ ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ತೀವ್ರ ಅನಾರೋಗ್ಯ ಕಾರಣದಿಂದಾಗಿ ಕಳೆದ 20 ದಿನಗಳಿಂದ ಬೆಂಗಳೂರಿನ ಚಾಮರಾಜ ಪೇಟೆಯ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದಿದ್ದಾರೆ. ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 7:30 ರ ನಂತರ ಮೃತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಅವಕಾಶ ನೀಡಲಾಗುವುದು ನಂತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.