Odd Even ವ್ಯವಸ್ಥೆ ಜಾರಿಗೊಳಿಸುವ ಅಗತ್ಯವಿರಲಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ದೆಹಲಿಯಲ್ಲಿ ಆಡ್-ಈವ್ ವ್ಯವಸ್ಥೆಯನ್ನು ಜಾರಿಗೆ ತರುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

Last Updated : Sep 13, 2019, 02:12 PM IST
Odd Even ವ್ಯವಸ್ಥೆ ಜಾರಿಗೊಳಿಸುವ ಅಗತ್ಯವಿರಲಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ title=

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ದೀಪಾವಳಿಯ ನಂತರ ಸಂಭವನೀಯ ಮಾಲಿನ್ಯದ ದೃಷ್ಟಿಯಿಂದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಆಡ್ ಈವ್ ಯೋಜನೆಯನ್ನು ಜಾರಿಗೆ ತರಲು ಮುಂದಾಗಿರುವುದು ಅನಗತ್ಯ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಹೇಳಿದ್ದಾರೆ.

ದೆಹಲಿಯಲ್ಲಿ ಆಡ್-ಈವ್ ವ್ಯವಸ್ಥೆಯನ್ನು ಜಾರಿಗೆ ತರುವ ಅಗತ್ಯವಿಲ್ಲ. ಇದೊಂದು ಅನಗತ್ಯ ನಿರ್ಧಾರ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಇನ್ನು ಆಡ್-ಈವ್ ಅಗತ್ಯವಿಲ್ಲ. ಹೇಗಾದರೂ ಹೊಸ ರಿಂಗ್ ರಸ್ತೆಯಿಂದಾಗಿ ಮಾಲಿನ್ಯ ಕಡಿಮೆಯಾಗಲಿದೆ. ದೆಹಲಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಾಲಿನ್ಯದ ಪ್ರಮಾಣ ಕಡಿಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
 

Trending News