ನವದೆಹಲಿ: ರಾಜಧಾನಿ ದೆಹಲಿಯಲ್ಲಿ ದೀಪಾವಳಿಯ ನಂತರ ಸಂಭವನೀಯ ಮಾಲಿನ್ಯದ ದೃಷ್ಟಿಯಿಂದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಆಡ್ ಈವ್ ಯೋಜನೆಯನ್ನು ಜಾರಿಗೆ ತರಲು ಮುಂದಾಗಿರುವುದು ಅನಗತ್ಯ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ದೆಹಲಿಯಲ್ಲಿ ಆಡ್-ಈವ್ ವ್ಯವಸ್ಥೆಯನ್ನು ಜಾರಿಗೆ ತರುವ ಅಗತ್ಯವಿಲ್ಲ. ಇದೊಂದು ಅನಗತ್ಯ ನಿರ್ಧಾರ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.


ರಾಷ್ಟ್ರ ರಾಜಧಾನಿಯಲ್ಲಿ ಇನ್ನು ಆಡ್-ಈವ್ ಅಗತ್ಯವಿಲ್ಲ. ಹೇಗಾದರೂ ಹೊಸ ರಿಂಗ್ ರಸ್ತೆಯಿಂದಾಗಿ ಮಾಲಿನ್ಯ ಕಡಿಮೆಯಾಗಲಿದೆ. ದೆಹಲಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಾಲಿನ್ಯದ ಪ್ರಮಾಣ ಕಡಿಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ.