ಧಾರವಾಡ: ನಾವು ಟಿಎಂಸಿ ಪಕ್ಷವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ. ಮಮತಾ ಬ್ಯಾನರ್ಜಿಯವರನ್ನು ಈ ಚುನಾವಣೆಯಲ್ಲಿ ಮುಗಿಸುತ್ತೇವೆ. ರಾಜಕೀಯವಾಗಿ ಅವರಿಗೆ ಅಂತ್ಯ ನೀಡುತ್ತೇವೆ ಎಂದು ಪಶ್ಚಿಮ ಬಂಗಾಳದಲ್ಲಿನ ಟಿಎಂಸಿ ಮತ್ತು ಬಿಜೆಪಿ(BJP)ಯ ನಡುವೆ ತೀವ್ರ  ತೀಕಾಟದ ಕುರಿತು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ: ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ..!


ಇಂದು ನಗರದಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿನ ರಾಜಕೀಯ ಕಿತ್ತಾಟಗಳು ನಿಮಗೆ ಗೊತ್ತೇ ಇವೆ. ಅಧಿಕಾರದಲ್ಲಿರುವ ಟಿಎಂಸಿ ಪಕ್ಷ ಮತ್ತು ವಿರೋಧ ಪಕ್ಷದಲ್ಲಿರುವ ಬಿಜೆಪಿಯ ನಡುವೆ ತೀವ್ರ ಕಿತ್ತಾಟ ನಡೆಯುತ್ತಲೇ ಇದೆ. ಎರಡೂ ಪಕ್ಷಗಳ ಕಾರ್ಯಕರ್ತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಹೇಳಿದರು.


'ಪಕ್ಷ ತೊರೆದು ಬಂದ ನಮ್ಮ ಮಿತ್ರರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ'


ತೃಣಮೂಲ ಕಾಂಗ್ರೆಸ್​ ಪಕ್ಷವು ಸಿಪಿಐಎಂ ರೀತಿಯಲ್ಲಿಯೇ ಕೆಲಸ ಮಾಡುತ್ತಿದೆ. ಬೇರೆ ಪಕ್ಷದವರು ಬೆಳೆಯದಂತೆ ತಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ 130ಕ್ಕೂ ಹೆಚ್ಚು ನಮ್ಮ ಕಾರ್ಯಕರ್ತರನ್ನು ಕೊಂದು ಹಾಕಿದ್ದಾರೆ.' ಎಂದು ಹೇಳಿದರು.


ಗ್ರಾ.ಪಂ ಚುನಾವಣೆ ಗೆಲ್ಲಲು ಬಿಜೆಪಿಯಿಂದ 'ಪಂಚರತ್ನ' ಸೂತ್ರ..!