ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಮೂರು ಮಂತ್ರಿಗಳು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಶುಕ್ರವಾರ ಭೇಟಿ ಮಾಡಿದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್ ಸೋನಿಯಾ ಅವರ ನಿವಾಸದಲ್ಲಿ ಅವರನ್ನು ಭೇಟಿಯಾದರು.
ಜೂನ್ 17 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಸುಗಮ ಕಾರ್ಯಕಲಾಪಕ್ಕೆ ಸಹಕಾರ ಕೋರುವ ನಿಟ್ಟಿನಲ್ಲಿ ಕಾಂಗ್ರೆಸ್ ಸಂಸದೀಯ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
Delhi: Union Parliamentary Affairs Minister Prahlad Joshi, MoS Parliamentary Affairs Arjun Ram Meghwal and Minister of Agriculture and Farmers Welfare Narendra Singh Tomar, met UPA Chairperson Sonia Gandhi at her residence ahead of upcoming parliament session pic.twitter.com/V122PcEP8C
— ANI (@ANI) June 7, 2019
ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಮ್ ನಬಿ ಆಜಾದ್ ಮತ್ತು ಲೋಕಸಭೆಯಲ್ಲಿ ಡಿಎಂಕೆ ನಾಯಕ ಟಿಆರ್ ಬಾಲು ಅವರನ್ನು ಜೋಶಿ ಭೇಟಿ ಮಾಡಿದ್ದಾರೆ.
17 ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 17 ರಿಂದ ಜುಲೈ 26 ರವರೆಗೆ ನಡೆಯಲಿದೆ. ಜುಲೈ 5 ರಂದು ಕೇಂದ್ರ ಬಜೆಟ್ ಮಂಡಿಸಲಾಗುವುದು.
ಮೊದಲ ಎರಡು ದಿನಗಳಲ್ಲಿ ಹೊಸ ಸಂಸದರು ಪ್ರಮಾಣವಚನ ಸ್ವೀಕರಿಸುತ್ತಾರೆ. ಸ್ಪೀಕರ್ ಚುನಾವಣೆ ಜೂನ್ 19 ರಂದು ನಡೆಯಲಿದೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಜೂನ್ 20 ರಂದು ಎರಡೂ ಮನೆಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.