ನವದೆಹಲಿ: ಪ್ರಸ್ತಕ ಮೋದಿ ಸರ್ಕಾರವನ್ನು ಸೋಲಿಸುವ ನಿಟ್ಟಿನಲ್ಲಿ ರಾಷ್ಟ್ರಾದ್ಯಂತ ಮಹಾಮೈತ್ರಿಗೆ ಮುಂದಾಗಿರುವ ಪ್ರತಿಪಕ್ಷಗಳ ನಡೆ ದೇಶಕ್ಕೆ ಮಾರಕ ಎಂದು ರಜನಿಕಾಂತ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಆ ಮೂಲಕ ಎಲ್ಲೋ ಒಂದು ಕಡೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮೋದಿ ಸರ್ಕಾರದ ಪರವಾಗಿ ನಿಲ್ಲುತ್ತಾರೆ ಎನ್ನುವ ಸಂಶಯ ವ್ಯಾಪಕವಾಗಿದೆ. ಪ್ರಧಾನಿ ಮೋದಿ ವಿರುದ್ಧ ಬಿಜೆಪಿಯೇತರ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿರುವ ಹಿನ್ನಲೆಯಲ್ಲಿ ಈಗ ರಜನಿಕಾಂತ್ ಅವರ ಹೇಳಿಕೆ ಬಂದಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.


ಸುದ್ದಿಗಾರರು ಮೋದಿ ಸರ್ಕಾರದ ವಿರುದ್ದ ಹೆಣೆಯುತ್ತಿರುವ ಮಹಾಘಟಬಂಧನ್ ಎನ್ನುವ ರಣತಂತ್ರಕ್ಕೆ ನಿಮ್ಮ ಬೆಂಬಲವಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಜನಿ ಇಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ಯಾಕೇ ವಿಪಕ್ಷಗಳು ಒಗ್ಗಟ್ಟಾಗುತ್ತಿವೆ ಎನ್ನುವುದರ ಬಗ್ಗೆ ಪ್ರತಿಕ್ರಿಯಿಸಿತ್ತಾ ಅದಕ್ಕೂ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.ಇನ್ನು ಮುಂದುವರೆದು ಈಗ ರಚನೆಯಾಗುತ್ತಿರುವ ಮಹಾಘಟ್​ ಬಂಧನ ಮೋದಿಗಿಂತ ಅಪಾಯಕಾರಿ ಎಂದು ಅವರು ತಿಳಿಸಿದ್ದಾರೆ.


ಇದುವರೆಗೂ ಪ್ರಧಾನಿ ಮೋದಿ ವಿರುದ್ದ ಹೇಳಿಕೆ ನೀಡದ ರಜನಿಕಾಂತ್ ಅವರು ಈಗ ಏಕಾಏಕಿ  ಮಹಾಘಟಬಂಧನ್ ರಚನೆ ವಿರೋಧ ವ್ಯಕ್ತಪಡಿಸುತ್ತಿರುವುದು ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಮಾತುಗಳು ಕೂಡ ರಾಜಕೀಯವಲಯದಲ್ಲಿ ಕೇಳಿ ಬರುತ್ತಿವೆ.