ಚಂಡೀಗಢ: ಅವಿವಾಹಿತರಿಗೆ ಪಿಂಚಣಿ ನೀಡುವ ಯೋಜನೆಯನ್ನು ಜಾರಿಗೆ ತರುವುದಾಗಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಘೋಷಿಸಿದ್ದಾರೆ. ಕರ್ನಾಲ್ ಜಿಲ್ಲೆಯ ಕಲಾಂಪುರ ಗ್ರಾಮದಲ್ಲಿ ಸೋಮವಾರ ನಡೆದ ಜನಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ಪಸ್ತಾಪಿಸಿದರು.
‘ರಾಜ್ಯದಲ್ಲಿ 45-60 ವಯೋಮಾನದ ಅವಿವಾಹಿತರಿಗೆ ಶೀಘ್ರದಲ್ಲೇ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ. ಇನ್ನೊಂದು ತಿಂಗಳಲ್ಲಿ ಈ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಖಟ್ಟರ್ ತಿಳಿಸಿದ್ದಾರೆ.
ಇದನ್ನೂ ಓದಿ: ಇಡೀ ದೇಶವನ್ನು ವ್ಯಾಪಿಸಿದ ನೈಋತ್ಯ ಮುಂಗಾರು
‘ಜನ ಸಂವಾದ’ ಕಾರ್ಯಕ್ರಮದ ಸಂದರ್ಭದಲ್ಲಿ 60 ವರ್ಷದ ಅವಿವಾಹಿತ ವ್ಯಕ್ತಿಯ ಪಿಂಚಣಿ ಸಂಬಂಧಿತ ದೂರಿಗೆ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ‘ನಮ್ಮ ಸರ್ಕಾರವು ಹೊಸ ಪಿಂಚಣಿ ಯೋಜನೆಯನ್ನು ಪರಿಚಯಿಸಲು ಯೋಜಿಸುತ್ತಿದೆ’ ಎಂದು ಹೇಳಿದರು.
वृद्धावस्था पेंशन को हम अगले 6 महीने में बढ़ाकर ₹3,000 कर देंगे pic.twitter.com/4fRBnLhopu
— Manohar Lal (@mlkhattar) July 2, 2023
‘ಮುಂದಿನ 6 ತಿಂಗಳೊಳಗೆ ರಾಜ್ಯದಲ್ಲಿ ವೃದ್ಧರ ಪಿಂಚಣಿಯನ್ನು ತಿಂಗಳಿಗೆ 3000 ರೂ.ಗೆ ಹೆಚ್ಚಿಸಲಾಗುವುದು. ಹರಿಯಾಣದ ಪ್ರತಿಯೊಂದು ಗ್ರಾಮ ಪಂಚಾಯ್ತಿಗಳಲ್ಲಿ ಸಂಸ್ಕೃತಿ ಮಾದರಿ ಶಾಲೆ, ಪ್ರತಿ ಗ್ರಾಮಕ್ಕೂ ಅತಿವೇಗದ ಇಂಟರ್ನೆಟ್ ಸೇವೆ ಒದಗಿಸುವ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: 2024ರ ಚುನಾವಣೆಗೂ ಮುನ್ನ ವಿಪಕ್ಷ ಕುಲಕ್ಕೆ ಸೆಡ್ಡು: ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುತ್ತಾ ಬಿಜೆಪಿ?
ಇಂದಿನ ದಿನಗಳಲ್ಲಿ ಶೇ.70 ರಿಂದ ಶೇ.80ರಷ್ಟು ಕೆಲಸಗಳು ಆನ್ಲೈನ್ನಲ್ಲಿ ನಡೆಯುತ್ತಿದ್ದು, ಅದಕ್ಕಾಗಿಯೇ ಹಳ್ಳಿಗಳಲ್ಲಿ ಇಂಟರ್ನೆಟ್ ಸೇವೆ ಅಗತ್ಯವಾಗಿದ್ದು, ಪ್ರತಿ ಗ್ರಾಮಕ್ಕೂ ಬಿಎಸ್ಎನ್ಎಲ್ ಇಂಟರ್ನೆಟ್ ಸೇವೆ ದೊರೆಯುವ ಮೊದಲ ಜಿಲ್ಲೆ ಕರ್ನಾಲ್ ಆಗಲಿದೆ ಎಂದು ಮುಖ್ಯಾಧಿಕಾರಿ ಹೇಳಿದರು.
ಸರಕಾರಿ ಶಾಲೆಗೆ ನೂತನ ಕಟ್ಟಡ ಹಾಗೂ ಕಛ್ವಾದಿಂದ ಕಾಳಂಪುರವರೆಗೆ 2 ತಿಂಗಳೊಳಗೆ ರಸ್ತೆ ನಿರ್ಮಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ತಿಳಿಸಿದರು. ಸರ್ಕಾರಿ ಶಾಲೆಯಲ್ಲಿ ವಾಲಿಬಾಲ್ ಮೈದಾನ ನಿರ್ಮಾಣ ಹಾಗೂ ಕೆರೆ ನವೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಸೂಚಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.