Congress Manifesto for UP Election: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದ್ದು, ಇದಕ್ಕಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ (Congress Manifesto for UP Election) ಸಿದ್ಧಪಡಿಸಿದೆ. ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ಮೂಲಕ ಈ ಮಾಹಿತಿಯನ್ನು ನೀಡಿದ್ದು, ಘೋಷಣೆಗಳನ್ನು ಪ್ರಕಟಿಸಿದ್ದಾರೆ.


COMMERCIAL BREAK
SCROLL TO CONTINUE READING

3 ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು:
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  (Priyanka Gandhi)  ಟ್ವೀಟ್ ಮಾಡಿ, 'ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ, ನಿಮ್ಮ ಪ್ರತಿ ದಿನವೂ ಹೋರಾಟಗಳಿಂದ ತುಂಬಿದೆ. ಅದನ್ನು ಅರ್ಥ ಮಾಡಿಕೊಂಡ ಕಾಂಗ್ರೆಸ್ ಪಕ್ಷ ನಿಮಗಾಗಿ ಪ್ರತ್ಯೇಕ ಮಹಿಳಾ ಪ್ರಣಾಳಿಕೆ ಸಿದ್ಧಪಡಿಸಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ವಾರ್ಷಿಕ 3 ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು. ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತವಾಗಿರುತ್ತದೆ ಎಂದು ಘೋಷಿಸಿದ್ದಾರೆ.


Bank Holidays November 2021: ನವೆಂಬರ್‌ನಲ್ಲಿ 17 ದಿನ ಬ್ಯಾಂಕ್ ರಜೆ, ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ


ಉತ್ತರ ಪ್ರದೇಶ ಚುನಾವಣೆ: ಮಹಿಳೆಯರಿಗಾಗಿ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ
ಆಶಾ ಮತ್ತು ನನ್ನ ಅಂಗನವಾಡಿಯ ಸಹೋದರಿಯರಿಗೆ ತಿಂಗಳಿಗೆ 10 ಸಾವಿರ ರೂಪಾಯಿ ಗೌರವಧನ ಸಿಗಲಿದೆ ಎಂದು ಪ್ರಿಯಾಂಕಾ ಗಾಂಧಿ ಮುಂದಿನ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಹೊಸ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿಯ ನಿಬಂಧನೆಗಳ ಪ್ರಕಾರ, ಶೇಕಡಾ 40 ರಷ್ಟು ಹುದ್ದೆಗಳಲ್ಲಿ ಮಹಿಳೆಯರನ್ನು ನೇಮಿಸಲಾಗುತ್ತದೆ. ಇದಲ್ಲದೆ  ತಿಂಗಳಿಗೆ 1000 ರೂ. ವಿಧವಾ ಪಿಂಚಣಿಯನ್ನು ನೀಡಲಾಗುವುದು. ಉತ್ತರಪ್ರದೇಶದ (Uttar Pradesh) ನಾಡಿನ ನಾಯಕಿಯರ ಹೆಸರಿನಲ್ಲಿ ರಾಜ್ಯಾದ್ಯಂತ 75 ಕೌಶಲ್ಯ ಶಾಲೆಗಳನ್ನು ತೆರೆಯಲಾಗುವುದು. ಇದರೊಂದಿಗೆ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡಲಿದೆ. ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್ ಮತ್ತು ಸ್ಕೂಟಿ ನೀಡಲಾಗುವುದು  ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.


Pension Scheme: ಪ್ರತಿ ತಿಂಗಳು ರೂ. 210 ಠೇವಣಿ ಮಾಡಿ 5000 ರೂ. ಪಿಂಚಣಿ ಪಡೆಯಿರಿ


2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಎಸ್‌ಪಿ ಒಟ್ಟಿಗೆ ಸ್ಪರ್ಧಿಸಿದ್ದವು:
2017ರ ವಿಧಾನಸಭಾ ಚುನಾವಣೆಯಲ್ಲಿ (Uttar Pradesh Assembly Elections) ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಒಟ್ಟಾಗಿ ಸ್ಪರ್ಧಿಸಿದ್ದವು. ಸಮಾಜವಾದಿ ಪಕ್ಷವು ಕಾಂಗ್ರೆಸ್ ಜೊತೆ ಒಪ್ಪಂದ ಮಾಡಿಕೊಂಡು 311 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಮಿತ್ರಪಕ್ಷ ಕಾಂಗ್ರೆಸ್ 114 ಸ್ಥಾನಗಳಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಿತು. ಚುನಾವಣೆಯಲ್ಲಿ ಎಸ್‌ಪಿ ಕೇವಲ 47 ಸ್ಥಾನಗಳನ್ನು ಪಡೆದು ಶೇ.21.82 ಮತಗಳನ್ನು ಪಡೆದಿತ್ತು. ಅದೇ ಸಮಯದಲ್ಲಿ, ಕಾಂಗ್ರೆಸ್ ಕೇವಲ 7 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಮತ್ತು ಅದು 6.25 ರಷ್ಟು ಮತಗಳನ್ನು ಗಳಿಸಿತು. 2017ರಲ್ಲಿ ಬಿಜೆಪಿ 384 ಸ್ಥಾನಗಳಲ್ಲಿ ಸ್ಪರ್ಧಿಸಿ ಶೇ.39.67 ಮತಗಳನ್ನು ಪಡೆದಿತ್ತು. ಬಿಜೆಪಿ 312 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಗಳಿಸಿತ್ತು. ಬಹುಜನ ಸಮಾಜ ಪಕ್ಷ (ಬಿಎಸ್ಪಿ) 403 ಸ್ಥಾನಗಳಲ್ಲಿ ಸ್ಪರ್ಧಿಸಿ, ಅದು ಕೇವಲ 19 ಸ್ಥಾನಗಳನ್ನು ಮತ್ತು 22.23 ರಷ್ಟು ಮತಗಳನ್ನು ಗಳಿಸಿತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ