ನವದೆಹಲಿ: ನವೆಂಬರ್ 30 ರವರೆಗೆ ವಿವಿಧ ಜಿಲ್ಲೆಗಳಲ್ಲಿ ನೇಮಕಗೊಂಡಿರುವ ಎಲ್ಲಾ ಸರ್ಕಾರಿ ಅಧಿಕಾರಿಗಳ ರಜೆಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ.


COMMERCIAL BREAK
SCROLL TO CONTINUE READING

ಬುಧವಾರ ಹೊರಡಿಸಿದ ಸರ್ಕಾರದ ಆದೇಶದ ಪ್ರಕಾರ ಫೀಲ್ಡ್ ಪೋಸ್ಟಿಂಗ್‌ನಲ್ಲಿರುವ ಎಲ್ಲ ಅಧಿಕಾರಿಗಳಿಗೆ ಆಯಾ ಜಿಲ್ಲೆಗಳಿಂದ ಹೊರ ಹೋಗದಂತೆ ಸೂಚಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಮಾತ್ರ ರಜೆ ಮಂಜೂರು ಮಾಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.ಮುಂದಿನ ಹಬ್ಬದ ದೃಷ್ಟಿಯಿಂದ ಇದನ್ನು ಮಾಡಲಾಗುತ್ತಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.ಆದರೆ, ನವೆಂಬರ್ ಮಧ್ಯದಲ್ಲಿ ನಿರೀಕ್ಷಿಸಲಾಗಿರುವ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಂಬರುವ ತೀರ್ಪನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.


ಇಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಯುಪಿ ಪೊಲೀಸರಿಗೆ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಸೂಚನೆ ನೀಡಿದರು.ವಾಹನ ಚಾಲಕರಿಂದ ದಂಡ ವಸೂಲಿ ಮಾಡುವುದು ತಮ್ಮ ಗುರಿಯಾಗಬಾರದು ಆದರೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಅಕ್ಟೋಬರ್ 16 ರಂದು ತಮ್ಮ ನಿವಾಸದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ವಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.