ಲಕ್ನೋ: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರವಾಹ ಪರಿಸ್ಥಿತಿಯಿಂದಾಗಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ನಿಮಿತ್ತ ಸರ್ಕಾರಿ ಅಧಿಕಾರಿಗಳಿಗೆ ರಜೆ ನೀಡಲು ಸಾಧ್ಯವಿಲ್ಲ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶಿಸಿದೆ. 


COMMERCIAL BREAK
SCROLL TO CONTINUE READING

ಪ್ರವಾಹದಿಂದಾಗಿ ರಾಜ್ಯದಲ್ಲಿ ಸಾಕಷ್ಟು ಹಾನಿಯಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರಿಗೆ ಆಹಾರ ಸಾಮಗ್ರಿಗಳ ಕೊರತೆಯಾಗದಂತೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ಹಾಗೂ ಸಂತ್ರಸ್ತ ಕುಟುಂಬಗಳಿಗೆ ತುರ್ತಾಗಿ ಆರ್ಥಿಕ ಪರಿಹಾರ ಒದಗಿಸಬೇಕಿರುವುದರಿಂದ ಅಧಿಕಾರಿಗಳಿಗೆ ರಜೆ ತೆಗೆದುಕೊಳ್ಳದಂತೆ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. 


ಉತ್ತರಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಇದುವರೆಗೆ 93 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ,  ಭಾನುವಾರ 14 ಮಂದಿ, ಶನಿವಾರ 25 ಮಂದಿ ಸಾವನ್ನಪ್ಪಿರುವುದಾಗಿ ಸರ್ಕಾರದ ವರದಿಗಳು ತಿಳಿಸಿವೆ.


ಇದೇ ವೇಳೆ, ಅಧಿಕಾರಿಗಳು ತಮ್ಮ ಜಿಲ್ಲೆಗಳ ಪ್ರವಾಸ ಕೈಗೊಳ್ಳಲು ಮತ್ತು ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸ್ಥಳದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಸರ್ಕಾರ ನಿರ್ದೇಶಿಸೈಡ್ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.