ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಸೇರಿದಂತೆ ಎಲ್ಲಾ ಸಚಿವರು ಇನ್ಮುಂದೆ ತಮ್ಮ ಆದಾಯ ತೆರಿಗೆಯನ್ನು ತಾವೇ ಪಾವತಿಸಲಿದ್ದಾರೆ. ಈ ಬಗ್ಗೆ ಉತ್ತರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಈ ಮಾಹಿತಿ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಉತ್ತರಪ್ರದೇಶದ ಸಚಿವರ ಸಂಬಳ ಮತ್ತು ವಿವಿಧ ಕಾಯ್ದೆ -1981ರ ಅಡಿಯಲ್ಲಿ ಎಲ್ಲ ಸಚಿವರ ಆದಾಯ ತೆರಿಗೆಯನ್ನು ರಾಜ್ಯ ಸರ್ಕಾರದ ನಿಧಿಯಿಂದ ಈವರೆಗೆ ಪಾವತಿಸಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯಂತೆ ಈಗ ಎಲ್ಲ ಸಚಿವರು ತಮ್ಮ ಆದಾಯ ತೆರಿಗೆಯನ್ನು ತಾವೇ ಪಾವತಿಸಲು ನಿರ್ಧರಿಸಲಾಗಿದೆ. ಹೀಗಾಗಿ ಕಾಯಿದೆಯ ಈ ನಿಬಂಧನೆಯನ್ನು ರದ್ದುಗೊಳಿಸಲು ಸಿಎಂ ನಿರ್ಧರಿಸಿರುವುದಾಗಿ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಹೇಳಿದ್ದಾರೆ.


ಉತ್ತರಪ್ರದೇಶದಲ್ಲಿ ಸುಮಾರು ನಾಲ್ಕು ದಶಕಗಳಷ್ಟು ಹಳೆಯದಾದ ನಿಯಮದಡಿಯಲ್ಲಿ ಮಂತ್ರಿಗಳ ಆದಾಯ ತೆರಿಗೆಯನ್ನು ಸರ್ಕಾರದ ಖಜಾನೆಯಿಂದಲೇ ಈವರೆಗೆ ಪಾವತಿಸಲಾಗುತ್ತಿತ್ತು. ಆದರೀಗ ಸಿಎಂ ಯೋಗಿಆದಿತ್ಯನಾಥ್ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಾರೆ.