ಲಕ್ನೋ : ಗಣರಾಜ್ಯೋತ್ಸವ ದಿನದಂದು ಉತ್ತರಪ್ರದೇಶದ ಕಾಸ್ಗಂಜ್ ನಲ್ಲಿ 22 ವರ್ಷದ ಯುವಕನೊಬ್ಬನ ಹತ್ಯೆಯ ನಂತರ ಹಿಂಸಾಚಾರ ಭುಗಿಲೆದ್ದ ಕಾರಣ, ನಗರದಲ್ಲಿ ಶಾಂತಿಗೆ ಭಂಗ ತಂದ 31 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚಿನ ವರದಿಗಳ ಪ್ರಕಾರ, ಈ ಪ್ರಕರಣದ ಕುರಿತು ತನಿಖೆ ನಡೆಸಿ, ಈ ಘಟನೆಗೆ ಕಾರಣರಾದ ಶಂಕಿತ ಆರೋಪಿಗಳನ್ನು ಪತ್ತೆಹಚ್ಚಲು ಉತ್ತರಪ್ರದೇಶ ಪೋಲಿಸ್ ವಿಶೇಷ ತನಿಖಾ ತಂಡವನ್ನು ರಚಿಸಿದೆ.
@myogiadityanath जी
क्या उत्तर प्रदेश में अभी भी कुछ अंग्रेज़ / मुग़ल बसते हैं जो वंदेमातरम् बोलने पर चंद्रशेखर आज़ाद जैसे व्यक्तित्व के स्वामी इस 👇बच्चे को गोली मार दी गई. @kasganjpolice गुनाहगारों को फ़ौरन पकड़ कर फ़ांसी चढ़वाने का प्रबंध करें @Uppolice@dgpup pic.twitter.com/6ofhBWZkYj— Ashok Kapoor (@kapoorashok25) January 27, 2018
ಜ.26ರಂದು ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಯುವಕರ ತಂಡವೊಂದು ಹಮ್ಮಿಕೊಂಡಿದ್ದ ತ್ರಿರಂಗ ಯಾತ್ರೆಯಲ್ಲಿ ಅಪರಿಚಿತರು ಕಲ್ಲುತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ 16 ವರ್ಷದ ಬಾಲಕ ಮೃತಪಟ್ಟಿದ್ದು, ಇಬ್ಬರಿಗೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಆ ಬಳಿಕ ನಗರದಲ್ಲಿ ಹಿಂಸಾಚಾರ ಭುಗಿಲೆದ್ದು, ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆಯಲ್ಲದೆ 12ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಆರ್.ಪಿ.ಸಿಂಗ್, ಕಲ್ಲು ತೂರಾಟ, ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಮೃತ ಬಾಲಕನನ್ನು ಚಂದನ್(16) ಎಂದು ಗುರುತಿಸಲಾಗಿದೆ. ಅಲ್ಲದೆ, ಕಾಸ್ಗಂಜ್ನಾದ್ಯಂತ ಕರ್ಫ್ಯೂ ಹೇರಲಾಗಿದೆ. ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.
ಇದೆ ವೇಳೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತನ ಆತ್ಮಕ್ಕೆ ಶಾಂತಿ ಕೋರಿದ್ದು, ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
#UPCM श्री #YogiAdityanath ने कासगंज में दो पक्षों के विवाद में एक युवक की मृत्यु पर गहरा शोक व्यक्त करते हुए प्रशासन से पीड़ित परिवार की हरसंभव मदद करने के निर्देश दिए हैं।
— CM Office, GoUP (@CMOfficeUP) January 26, 2018
ಈ ಮಧ್ಯೆ, ಹಿಂಸಾಚಾರ ಮತ್ತಷ್ಟು ಭುಗಿಲೆದ್ದಿದ್ದು, ಎರಡು ಅಂಗಡಿಗಳು ಮತ್ತು ಒಂದು ಬಸ್ ಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ, ಈ ಕೃತ್ಯದಲ್ಲಿ ಭಾಗಿಯಾದ ಆರೋಪದ ಮೇಲೆ 9 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.