ನವದೆಹಲಿ: ಅಲ್-ಖೈದಾ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ನನ್ನು ವಿಶ್ವದ ಅತ್ಯುತ್ತಮ ಜೂನಿಯರ್ ಇಂಜಿನಿಯರ್ ಎಂದು ಬಣ್ಣಿಸುವ ಚಿತ್ರವನ್ನು ತನ್ನ ಕಚೇರಿಯಲ್ಲಿ ಹಾಕಿದ್ದಕ್ಕಾಗಿ ಸರ್ಕಾರಿ ವಿದ್ಯುತ್ ವಿತರಣಾ ಕಂಪನಿಯ ಅಧಿಕಾರಿಯನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ದಕ್ಷಿಣಾಂಚಲ್ ವಿದ್ಯುತ್ ವಿತ್ರನ್ ನಿಗಮ್ ಲಿಮಿಟೆಡ್ (DVVNL) ನ ಉಪವಿಭಾಗಾಧಿಕಾರಿ (SDO)ರವೀಂದ್ರ ಪ್ರಕಾಶ್ ಗೌತಮ್ ಅವರು ತಮ್ಮ ಕಚೇರಿಯಲ್ಲಿ ಬಿನ್ ಲಾಡೆನ್ ಚಿತ್ರವನ್ನು ಇರಿಸಿ, ಅದರ ಕೆಳಗೆ "ಗೌರವಾನ್ವಿತ ಒಸಾಮಾ ಬಿನ್ ಲಾಡೆನ್, ವಿಶ್ವದ ಅತ್ಯುತ್ತಮ ಜೂನಿಯರ್ ಇಂಜಿನಿಯರ್" ಎಂದು ಬರೆದುಕೊಂಡಿದ್ದರು.ಈ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಹಿರಿಯ ಜಿಲ್ಲಾ ಅಧಿಕಾರಿಗಳು ಗಮನ ಸೆಳೆದು ಎಸ್‌ಡಿಒ ಅವರನ್ನು ಅಮಾನತುಗೊಳಿಸುವಂತೆ ಆದೇಶಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ