ನವದೆಹಲಿ : ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಈಗ ಮುಂಬರಲಿರುವ ಗುಜರಾತ್ ಚುನಾವಣೆಯತ್ತ ಗಮನ ಹರಿಸಿದ್ದಾರೆ. ಇಂದು ಗುಜರಾತ್‌ಗೆ ಭೇಟಿ ನೀಡಿದ ಪಿಎಂ ಮೋದಿ ಅವರು ಶುಕ್ರವಾರ ಅಹಮದಾಬಾದ್‌ನಲ್ಲಿ ಬೃಹತ್ ರೋಡ್‌ಶೋ ನಡೆಸಿದರು.
ಪ್ರಧಾನಿ ಮೋದಿ(PM Modi) ಅವರು ತಮ್ಮ ತವರು ರಾಜ್ಯವಾದ ಗುಜರಾತ್‌ಗೆ ಇಂದಿನಿಂದ ಎರಡು ದಿನಗಳ ಭೇಟಿ ನೀಡಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗುಜರಾತ್ ಬಿಜೆಪಿ ಪ್ರಧಾನ ಕಚೇರಿವರೆಗೆ ರೋಡ್‌ಶೋ ನಡೆಸಿದರು.
ಇದನ್ನೂ ಓದಿ : Punjab Assembly Elections 2022: ಪಂಜಾಬ್ ಚುನಾವಣೆಯ ಭವಿಷ್ಯ ನುಡಿದಿದ್ದ ಜೋಫ್ರಾ ಆರ್ಚರ್!
ಸಂಜೆ 4 ಗಂಟೆಗೆ ಪ್ರಧಾನಿಯವರು ಗುಜರಾತ್ ಪಂಚಾಯತ್ ಮಹಾಸಮ್ಮೇಳನದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಶನಿವಾರ, ಪ್ರಧಾನಿ ಮೋದಿ ಅವರು ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ (RRU) ಕಟ್ಟಡವನ್ನು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ RRU ನ ಮೊದಲ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಮತ್ತು ಸಂಜೆ 6:30 ರ ಸುಮಾರಿಗೆ ಅವರು 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.
#WATCH | PM Modi shows victory sign as he greets the crowd during roadshow in Ahmedabad, post BJP's win in Uttar Pradesh, Uttarakhand, Manipur and Goa. pic.twitter.com/ITcaNnXF4g
— ANI (@ANI) March 11, 2022
ಈ ವೇಳೆ ಪಕ್ಷದ ಮುಖಂಡರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ನಂತರ ಅಹಮದಾಬಾದ್‌ನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಗುಜರಾತ್ ವಿಧಾನಸಭೆ(Gujarat Assembly)ಯ ಅವಧಿ ಮುಂದಿನ ವರ್ಷ ಜನವರಿ 8 ರಂದು ಕೊನೆಗೊಳ್ಳಲಿದ್ದು, ಇದೇ ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ.
ಗುಜರಾತ್ ಜೊತೆಗೆ ಹಿಮಾಚಲ ಪ್ರದೇಶದಲ್ಲೂ ಚುನಾವಣೆ ನಡೆಯಲಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸುವ ಮೂಲಕ ಕಾಂಗ್ರೆಸ್ ಅಚ್ಚರಿ ಮೂಡಿಸಿತ್ತು. ಮಲೆನಾಡಿನ ಮಂಡಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿ ಸೋಲು ಅನುಭವಿಸಿತ್ತು.
ಇದನ್ನೂ ಓದಿ : 'ನಮ್ಮ ಕಠಿಣ ಪರಿಶ್ರಮವನ್ನು ಮತಗಳಾಗಿ ಪರಿವರ್ತಿಸಲು ಪಕ್ಷಕ್ಕೆ ಸಾಧ್ಯವಾಗಲಿಲ್ಲ'
ಬಿಜೆಪಿ(BJP) ಅಥವಾ ಅದರ ಮೈತ್ರಿಕೂಟದ ಪಾಲುದಾರರು ಅಧಿಕಾರದಲ್ಲಿರುವ ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆಗಳು ನಡೆಯಲಿವೆ.
ಮಾರ್ಚ್ 3 ರಂದು ನಡೆದ, ಉತ್ತರ ಪ್ರದೇಶದದಲ್ಲಿ 30 ವರ್ಷಗಳಲ್ಲಿ ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣೆ ಹಿಡಿದ ಬಿಜೆಪಿ ಏಕೈಕ ಪಕ್ಷ ಬಿಜೆಪಿ ಆಗಿದೆ. ಉತ್ತರಾಖಂಡ, ಮಣಿಪುರ ಮತ್ತು ಗೋವಾವನ್ನು ಸಹ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.