ನವದೆಹಲಿ : ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಗೆಲುವು ಸಾಧಿಸಿದ  ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಈಗ ಮುಂಬರಲಿರುವ ಗುಜರಾತ್‌ ಚುನಾವಣೆಯತ್ತ ಗಮನ ಹರಿಸಿದ್ದಾರೆ. ಇಂದು ಗುಜರಾತ್‌ಗೆ ಭೇಟಿ ನೀಡಿದ ಪಿಎಂ ಮೋದಿ ಅವರು ಶುಕ್ರವಾರ ಅಹಮದಾಬಾದ್‌ನಲ್ಲಿ ಬೃಹತ್ ರೋಡ್‌ಶೋ ನಡೆಸಿದರು.


COMMERCIAL BREAK
SCROLL TO CONTINUE READING

ಪ್ರಧಾನಿ ಮೋದಿ(PM Modi) ಅವರು ತಮ್ಮ ತವರು ರಾಜ್ಯವಾದ ಗುಜರಾತ್‌ಗೆ ಇಂದಿನಿಂದ ಎರಡು ದಿನಗಳ ಭೇಟಿ ನೀಡಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗುಜರಾತ್ ಬಿಜೆಪಿ ಪ್ರಧಾನ ಕಚೇರಿವರೆಗೆ ರೋಡ್‌ಶೋ ನಡೆಸಿದರು.


ಇದನ್ನೂ ಓದಿ : Punjab Assembly Elections 2022: ಪಂಜಾಬ್ ಚುನಾವಣೆಯ ಭವಿಷ್ಯ ನುಡಿದಿದ್ದ ಜೋಫ್ರಾ ಆರ್ಚರ್!


ಸಂಜೆ 4 ಗಂಟೆಗೆ ಪ್ರಧಾನಿಯವರು ಗುಜರಾತ್ ಪಂಚಾಯತ್ ಮಹಾಸಮ್ಮೇಳನದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


ಶನಿವಾರ, ಪ್ರಧಾನಿ ಮೋದಿ ಅವರು ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ (RRU) ಕಟ್ಟಡವನ್ನು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ RRU ನ ಮೊದಲ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಮತ್ತು ಸಂಜೆ 6:30 ರ ಸುಮಾರಿಗೆ ಅವರು 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.


'ನಮ್ಮ ಕಠಿಣ ಪರಿಶ್ರಮವನ್ನು ಮತಗಳಾಗಿ ಪರಿವರ್ತಿಸಲು ಪಕ್ಷಕ್ಕೆ ಸಾಧ್ಯವಾಗಲಿಲ್ಲ'


ಬಿಜೆಪಿ(BJP) ಅಥವಾ ಅದರ ಮೈತ್ರಿಕೂಟದ ಪಾಲುದಾರರು ಅಧಿಕಾರದಲ್ಲಿರುವ ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆಗಳು ನಡೆಯಲಿವೆ.


ಮಾರ್ಚ್ 3 ರಂದು ನಡೆದ, ಉತ್ತರ ಪ್ರದೇಶದದಲ್ಲಿ 30 ವರ್ಷಗಳಲ್ಲಿ ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣೆ ಹಿಡಿದ ಬಿಜೆಪಿ ಏಕೈಕ ಪಕ್ಷ ಬಿಜೆಪಿ ಆಗಿದೆ. ಉತ್ತರಾಖಂಡ, ಮಣಿಪುರ ಮತ್ತು ಗೋವಾವನ್ನು ಸಹ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.