ನವದೆಹಲಿ: 26/11 ಮುಂಬೈ ದಾಳಿ ಬಳಿಕ ಭಯೋತ್ಪಾದನೆ ನಿಗ್ರಹಕ್ಕೆ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಯುಪಿಎ ಸರ್ಕಾರ ತೆಗೆದುಕೊಳ್ಳಲಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ದೆಹಲಿಯಲ್ಲಿಂದು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿ ಬಗ್ಗೆ ಮಾತನಾಡುತ್ತಾರೆ. ಆದರೆ 26/11 ಮುಂಬೈ ಭಯೋತ್ಪಾದನಾ ದಾಳಿಯ ಬಳಿಕ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಹಿಂದಿನ ಯುಪಿಎ ಸರ್ಕಾರ ತೆಗೆದುಕೊಳ್ಳಲಿಲ್ಲ ಎಂದು ಹೇಳಿದರು.


ಮುಂದುವರೆದು ಮಾತನಾಡುತ್ತಾ, ಪುಲ್ವಾಮಾ ಬಳಿ ದಾಳಿ ನಡೆದ 10 ರಿಂದ 12 ದಿನಗಳ ಕಾಲ ಎಲ್ಲಾವನ್ನೂ ಅರಿತ ಸರ್ಕಾರ ಬಳಿಕ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಅನ್ವಯ ಭಾರತೀಯ ವಾಯು ಸೇನೆಯು ಜೈಶ್ ಉಗ್ರ ಸಂಘಟನೆಯ ಶಿಬಿರಗಳ ಮೇಲೆ ದಾಳಿ ನಡೆಸಿ ನೆಲಸಮ ಮಾಡಿತು ಎಂದು ಭಯೋತ್ಪಾದನೆ ವಿರುದ್ಧ ಎನ್ಡಿಎ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ನಿರ್ಮಲಾ ಸೀತಾರಾಮನ್ ವಿವರಿಸಿದರು.