ಮೀಸಲಾತಿ ಪಾಲನೆ: ನ್ಯಾಷನಲ್ ಲಾ ಸ್ಕೂಲ್ ಗೆ ಉನ್ನತ ಶಿಕ್ಷಣ ಸಚಿವರ ಪತ್ರ
ನ್ಯಾಷನಲ್ ಲಾ ಸ್ಕೂಲ್ ಯೂನಿವರ್ಸಿಟಿಯಲ್ಲಿ ಕಳೆದ ಎರಡು ವರ್ಷಗಳಿಂದ ಶೇಕಡ 25ರ ಸ್ಥಳೀಯ ಮೀಸಲಾತಿ ಕೊಡುತ್ತಿಲ್ಲ. ಬದಲಿಗೆ ಅಖಿಲ ಭಾರತ ಕೋಟಾದಡಿ ಮೆರಿಟ್ ಮೇಲೆ ಆಯ್ಕೆಯಾದ ರಾಜ್ಯದ ವಿದ್ಯಾರ್ಥಿಗಳನ್ನೇ ಈ ಮೀಸಲಾತಿ ವ್ಯಾಪ್ತಿಗೆ ತರುತ್ತಿರುವುದು ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ.
ಬೆಂಗಳೂರು: ಬೆಂಗಳೂರು ವಿವಿ ಆವರಣದಲ್ಲಿ ಇರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಕೂಡ ಸರಕಾರದ ನಿಯಮದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಳೀಯ ಮೀಸಲಾತಿ ಕೊಡಬೇಕು. ಈ ಸಂಬಂಧ ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಕುಲಪತಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ಬಣವಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಆಹಾರ ಧಾನ್ಯ ಸಂಪೂರ್ಣ ಭಸ್ಮ
ನ್ಯಾಷನಲ್ ಲಾ ಸ್ಕೂಲ್ ಯೂನಿವರ್ಸಿಟಿಯಲ್ಲಿ ಕಳೆದ ಎರಡು ವರ್ಷಗಳಿಂದ ಶೇಕಡ 25ರ ಸ್ಥಳೀಯ ಮೀಸಲಾತಿ ಕೊಡುತ್ತಿಲ್ಲ. ಬದಲಿಗೆ ಅಖಿಲ ಭಾರತ ಕೋಟಾದಡಿ ಮೆರಿಟ್ ಮೇಲೆ ಆಯ್ಕೆಯಾದ ರಾಜ್ಯದ ವಿದ್ಯಾರ್ಥಿಗಳನ್ನೇ ಈ ಮೀಸಲಾತಿ ವ್ಯಾಪ್ತಿಗೆ ತರುತ್ತಿರುವುದು ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ.ಇದು ಸಹಜ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ ಎಂದು ಅವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ರೈಲ್ವೆ ಮೇಲ್ಸೇತುವೆ / ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1,000 ಕೋಟಿ ರೂ : ಸಿಎಂ ಬೊಮ್ಮಾಯಿ
ಹೈದರಾಬಾದ್, ಕೋಲ್ಕತ್ತಾ, ತಿರುಚಿನಾಪಳ್ಳಿ, ವಿಶಾಖಪಟ್ಟಣ, ರಾಯ್ ಪುರ ಮುಂತಾದ ಕಡೆಗಳಲ್ಲಿ ಇರುವ ಇಂತಹುದೇ ಸಂಸ್ಥೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳ ಮೀಸಲಾತಿಯನ್ನು ಅನುಸರಿಸಲಾಗುತ್ತಿದೆ. ಇದರಂತೆ ಇಲ್ಲಿನ ನ್ಯಾಷನಲ್ ಲಾ ಸ್ಕೂಲ್ ಕೂಡ 2020ರಲ್ಲಿ ಜಾರಿಗೆ ತಂದಿರುವ ತಿದ್ದುಪಡಿ ನಿಯಮಕ್ಕೆ ಬದ್ಧವಾಗಿ ನಡೆದುಕೊಳ್ಳಬೇಕು ಎಂದು ಸಚಿವರು ಪತ್ರದಲ್ಲಿ ನಿರ್ದೇಶಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.