UPSC Results 2024: ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯ 2024ನೇ ಸಾಲಿನ ಫಲಿತಾಂಶವನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ. ಇದನ್ನು upsc.gov.inಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. ಈ ಬಾರಿ ಶಕ್ತಿ ದುಬೆ ಪ್ರಥಮ ರ‍್ಯಾಂಕ್ ಗಳಿಸಿದ್ದು, ದೇಶಕ್ಕೆ ನಂ.1 ಆಗಿ ಹೊರಹೊಮ್ಮಿದ್ದಾರೆ. ಯುಪಿಎಸ್‌ಸಿ ಅರ್ಹತೆ ಪಡೆದ ಒಟ್ಟು 1009 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇದರಲ್ಲಿ ಸಾಮಾನ್ಯ ವರ್ಗದಿಂದ 335 ಅಭ್ಯರ್ಥಿಗಳಿದ್ದರೆ, ಆರ್ಥಿಕವಾಗಿ ದುರ್ಬಲ ವರ್ಗದಿಂದ (EWS) 109 ಅಭ್ಯರ್ಥಿಗಳು ಮತ್ತು OBC ವರ್ಗದಿಂದ 318 ಅಭ್ಯರ್ಥಿಗಳಿದ್ದಾರೆ. 60 ಪರಿಶಿಷ್ಟ ಜಾತಿಗಳಿಗೆ (SC) ಮತ್ತು 87 ಪರಿಶಿಷ್ಟ ಪಂಗಡಗಳಿಗೆ (ST) ಸೇರಿದ್ದಾರೆ. ಇದರಲ್ಲಿ ನಾಲ್ಕು ವಿಭಾಗಗಳಲ್ಲಿ ಮಾನದಂಡದ ಅಂಗವೈಕಲ್ಯ ಹೊಂದಿರುವ 45 ಅಭ್ಯರ್ಥಿಗಳು ಸೇರಿದ್ದಾರೆ.
ಪತ್ರಿಕಾ ಮಾಹಿತಿ ಬ್ಯೂರೋ ಅಧಿಕೃತವಾಗಿ ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ಭಾರತೀಯ ಆಡಳಿತ ಸೇವೆ (IAS), ಭಾರತೀಯ ವಿದೇಶಾಂಗ ಸೇವೆ (IFS), ಭಾರತೀಯ ಪೊಲೀಸ್ ಸೇವೆ (IPS) ಮತ್ತು ಕೇಂದ್ರ ಸೇವೆಗಳು, ಗ್ರೂಪ್ 'A' ಮತ್ತು ಗ್ರೂಪ್ 'B' ಗೆ ನೇಮಕಾತಿಗಾಗಿ ಶಿಫಾರಸು ಮಾಡಲಾದ 1009 ಅಭ್ಯರ್ಥಿಗಳ ಪಟ್ಟಿ ಸೇರಿದೆ.
ಶಕ್ತಿ ದುಬೆ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ. ನಂತರ ಹರ್ಷಿತಾ ಗೋಯಲ್ 2ನೇ ಸ್ಥಾನ ಪಡೆದರೆ, ಡೋಂಗ್ರೆ ಅರ್ಚಿತ್ ಪರಾಗ್ 3ನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. 2024ರ ನಾಗರಿಕ ಸೇವಾ ಪರೀಕ್ಷಾ ನಿಯಮಗಳ ನಿಯಮ 20(4) ಮತ್ತು (5)ರ ಪ್ರಕಾರ 230 ಅಭ್ಯರ್ಥಿಗಳ ಏಕೀಕೃತ ಮೀಸಲು ಪಟ್ಟಿಯನ್ನು ಸಹ ನಿರ್ವಹಿಸಲಾಗಿದೆ.
ಇದನ್ನೂ ಓದಿ: 'ಗೋಲ್ಡನ್ ಎಟಿಎಂ'.. ಚಿನ್ನ ಹಾಕಿದರೆ ನಿಮ್ಮ ಖಾತೆಗೆ ಹಣ! ಶೀಘ್ರದಲ್ಲೇ ಭಾರತದಲ್ಲೂ..
2024ರ ಕೇಂದ್ರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯು ಜೂನ್ 16ರಂದು ನಡೆದಿತ್ತು. 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು. ಮುಖ್ಯ ಪರೀಕ್ಷೆಗೆ 14,627 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಈ ಪೈಕಿ 2,845 ಅಭ್ಯರ್ಥಿಗಳು ಸಂದರ್ಶನ ಹಂತಕ್ಕೆ ಆಯ್ಕೆಯಾಗಿದ್ದರು. ಐಎಎಸ್, ಐಎಫ್‌ಎಸ್, ಐಪಿಎಸ್ ಸೇರಿದಂತೆ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ವಿವಿಧ ಹುದ್ದೆಗಳಿಗೆ ಅಂತಿಮವಾಗಿ 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಈ ಪೈಕಿ 725 ಪುರುಷರು ಹಾಗೂ 284 ಮಹಿಳೆಯರು ಸೇರಿದ್ದಾರೆ.
ರಾಜ್ಯದ ಇಬ್ಬರ ಸಾಧನೆ: ಲಭ್ಯವಿರುವ ಮಾಹಿತಿ ಪ್ರಕಾರ, 50ರ ಒಳಗೆ ಕರ್ನಾಟಕದ ಇಬ್ಬರು ವೈದ್ಯರು ಯಶಸ್ಸು ಸಾಧಿಸಿದ್ದಾರೆ. ಡಾ.ರಂಗ ಮಂಜು 24ನೇ ಮತ್ತು ಡಾ.ಸಚಿನ್ ಹರಿಹರ್ 41ನೇ ಸ್ಥಾನ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









