ಬೆಂಗಳೂರಿನಲ್ಲಿ ಯುಎಸ್ ರಾಯಭಾರಿ ಕಚೇರಿ ಸ್ಥಾಪನೆ, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ತೇಜಸ್ವಿ ಸೂರ್ಯ
ಯುಎಸ್ ರಾಯಭಾರಿ ಕಚೇರಿಯು ಬೆಂಗಳೂರಿನಲ್ಲಿ ಕಾರ್ಯಾರಂಭಿಸಲು, ಕಾರಣೀಕರ್ತರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ ಧನ್ಯವಾದ ಅರ್ಪಿಸಿದರು.
ಬೆಂಗಳೂರು: ಯುಎಸ್ ರಾಯಭಾರಿ ಕಚೇರಿಯು ಬೆಂಗಳೂರಿನಲ್ಲಿ ಕಾರ್ಯಾರಂಭಿಸಲು, ಕಾರಣೀಕರ್ತರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ ಧನ್ಯವಾದ ಅರ್ಪಿಸಿದರು.
ಪ್ರಧಾನಿ ಮೋದಿಯವರ ಅಮೇರಿಕಾ ಭೇಟಿಯ ಹಿನ್ನಲೆಯಲ್ಲಿ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಗುರುವಾರ ಅಮೆರಿಕವು ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಎರಡು ಹೊಸ ಕಾನ್ಸುಲೇಟ್ಗಳನ್ನು (ರಾಯಭಾರಿ ಕಚೇರಿಗಳು) ತೆರೆಯಲಿದ್ದು, ಭಾರತವು ಸಿಯಾಟಲ್ನಲ್ಲಿ ಮಿಷನ್ ಸ್ಥಾಪಿಸಲಿದೆ ಎಂದು ಘೋಷಿಸಿದ್ದಾರೆ.ಬೆಂಗಳೂರಿನಲ್ಲಿ ರಾಯಭಾರಿ ಕಚೇರಿಯ ಸ್ಥಾಪನೆಯ ವಿಚಾರವಾಗಿಸೂರ್ಯ ಅವರು, ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ಯುಎಸ್ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಹಲವು ಬಾರಿ ಒತ್ತಾಯಿಸಿದ್ದರು.
ಬೆಂಗಳೂರಿನಲ್ಲಿ ಯುಎಸ್ ರಾಯಭಾರಿ ಕಚೇರಿಯನ್ನು ಸ್ಥಾಪಿಸುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ @narendramodi Ji ಮತ್ತು ಕೇಂದ್ರ ವಿದೇಶಾಂಗ ಸಚಿವರಾದ ಶ್ರೀ @DrSJaishankar ಅವರಿಗೆ ಧನ್ಯವಾದಗಳು. ಸಾವಿರಾರು ಅಂತರಾಷ್ಟ್ರೀಯ ಕಂಪನಿಗಳೊಂದಿಗೆ ವೇಗವಾಗಿ ಬೆಳೆಯುತ್ತಿರುವ ಮತ್ತು IT ಶಕ್ತಿ ಕೇಂದ್ರವಾಗಿರುವ ಬೆಂಗಳೂರಿಗೆ, ಇದು ದೀರ್ಘ ಕಾಲದ ಬೇಡಿಕೆಯಾಗಿತ್ತು. ಇದು ಲಕ್ಷಾಂತರ ಕನ್ನಡಿಗರಿಗೆ ಮತ್ತು ನಮ್ಮ ನಗರಕ್ಕೆ ಸಹಾಯ ಮಾಡುತ್ತದೆ ಎಂದು ಸೂರ್ಯ ಟ್ವೀಟ್ ಮಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ