ನವದೆಹಲಿ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು 107 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಗೋರಖ್‌ಪುರ ನಗರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಿದೆ. ಮೊದಲ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿರುವ ಸ್ಥಾನಗಳಿಗೆ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.


COMMERCIAL BREAK
SCROLL TO CONTINUE READING

ಬಿಜೆಪಿ(BJP)ಯ ಉತ್ತರ ಪ್ರದೇಶ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರೊಂದಿಗೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡಿದರು.


ಇದನ್ನೂ ಓದಿ : Preliminary Investigation Report: ಜನರಲ್ Bipin Rawat ಹೆಲಿಕ್ಯಾಪ್ಟರ್ ಹೇಗೆ ದುರಂತಕ್ಕೀಡಾಯ್ತು? ತನಿಖಾ ವರದಿಯಲ್ಲಿ ಮಹತ್ವದ ಅಂಶ ಬಹಿರಂಗ


ಗೋರಖ್‌ಪುರದಿಂದ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಿರತುದಿಂದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಪ್ರಧಾನ್ ಹೇಳಿದ್ದಾರೆ.


ಆದಿತ್ಯನಾಥ್(Yogi Adityanath) ಅವರು ಗೋರಖ್‌ಪುರದಿಂದ ಐದು ಬಾರಿ ಲೋಕಸಭೆ ಸದಸ್ಯರಾಗಿದ್ದರು. ಅವರು ಮತ್ತು ಮೌರ್ಯ ಪ್ರಸ್ತುತ ರಾಜ್ಯದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ.


"ಕಳೆದ ಐದು ವರ್ಷಗಳಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ ಕಲ್ಯಾಣ ಮತ್ತು ಸೂಕ್ಷ್ಮ ಆಡಳಿತವನ್ನು ನೀಡಿದೆ. 2022 ರ ಈ ಮಹಾನ್ ಉತ್ಸವದಲ್ಲಿ ಯುಪಿ ಜನರು ಮತ್ತೊಮ್ಮೆ ಅದೇ ಸ್ಪಷ್ಟತೆಯೊಂದಿಗೆ ನಮ್ಮನ್ನು ಆಶೀರ್ವದಿಸುತ್ತಾರೆ ಎಂಬ ವಿಶ್ವಾಸವಿದೆ" ಎಂದು ಪ್ರಧಾನ್ ಅವರನ್ನು ಉಲ್ಲೇಖಿಸಿ ಬಿಜೆಪಿ ಟ್ವೀಟ್ ಮಾಡಿದೆ.


ಇದನ್ನೂ ಓದಿ : ಫೆಬ್ರುವರಿ 1 ಕ್ಕೆ ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್


403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.