ನವದೆಹಲಿ: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಶುಕ್ರವಾರ ಕೊರೊನಾ ಧೃಢಪಟ್ಟಿರುವ ಹಿನ್ನಲೆಯಲ್ಲಿ ಈಗ ಅವರು ತಮ್ಮ ಮನೆಯಲ್ಲಿ ಕ್ವಾರೈಂಟೈನ್ ಗೆ ಒಳಗಾಗಿದ್ದಾರೆ.


COMMERCIAL BREAK
SCROLL TO CONTINUE READING

Coronavirus: ಸರ್ಕಾರಿ ನೌಕರರ Corona ಚಿಕಿತ್ಸೆಯ ವೆಚ್ಚ ಭರಿಸಲು ಮುಂದಾದ ಸರ್ಕಾರ


ಇದನ್ನು ಮಧ್ಯಾಹ್ನ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ರಾವತ್ 'ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದೇನೆ. ನನ್ನ ವರದಿ ಸಕಾರಾತ್ಮಕ ಬಂದಿದೆ.ನನ್ನ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಮತ್ತು ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲ. ಆದರೆ ವೈದ್ಯರ ಸಲಹೆಯ ಮೇರೆಗೆ ನಾನು ಮನೆಯ ಪ್ರತ್ಯೇಕತೆಯಲ್ಲಿಯೇ ಇರುತ್ತೇನೆ.ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ, ತಮ್ಮನ್ನು ಪ್ರತ್ಯೇಕಿಸಲು ಮತ್ತು ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ನಾನು ವಿನಂತಿಸುತ್ತೇನೆ'ಎಂದು ಅವರು ಟ್ವೀಟ್ ಮಾಡಿದ್ದಾರೆ.


ಸಾಂಕ್ರಾಮಿಕ ಸಮಯದಲ್ಲಿ ರಾವತ್ ತನ್ನನ್ನು ಪ್ರತ್ಯೇಕಿಸಿಕೊಳ್ಳುವುದು ಇದೇ ಮೊದಲಲ್ಲ. ಸೆಪ್ಟೆಂಬರ್‌ನಲ್ಲಿ, ಅವರ ಸಿಬ್ಬಂಧಿಗೆ ಕೊರೊನಾ ಧೃಢಪಟ್ಟಿದ್ದ ಹಿನ್ನಲೆಯಲ್ಲಿ ಆಗ ಕ್ವಾರಂಟೈನ್ ಗೆ ಹೋಗಿದ್ದರು.