ನವದೆಹಲಿ: ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಇರುವ ಶೃಂಗಾರ್ ಗೌರಿ-ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಎಎಸ್‌ಐ ಸಮೀಕ್ಷೆಯನ್ನು ನ್ಯಾಯಾಲಯ ಅನುಮೋದಿಸಿದೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ತೀರ್ಪಿನ ಪ್ರತಿಯನ್ನು ಓದಿದ್ದಾರೆ ಮತ್ತು ನ್ಯಾಯಾಲಯವು ಎಎಸ್‌ಐ ಸಮೀಕ್ಷೆಗೆ ಆದೇಶಿಸಿದೆ ಎಂದು ಹೇಳಿದ್ದಾರೆ. "ತಾವು ಸಲ್ಲಿಸಿದ್ದ ಅರ್ಜಿಯನ್ನು ಅನುಮೋದಿಸಲಾಗಿದೆ ಎಂದು ತಮಗೆ ತಿಳಿಸಲಾಗಿದೆ ಮತ್ತು ನ್ಯಾಯಾಲಯವು ವಜುಖಾನಾ ಹೊರತುಪಡಿಸಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಗೆ ಸೂಚನೆ ನೀಡಿದೆ" ಎಂದು ಜೈನ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ಇಡೀ ಜ್ಞಾನವಾಪಿ ಸಂಕೀರ್ಣದ ಪುರಾತತ್ವ ಮತ್ತು ವೈಜ್ಞಾನಿಕ ತನಿಖೆಯ ಬೇಡಿಕೆಯ ಕುರಿತು ಜುಲೈ 14 ರಂದು ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು ಮತ್ತು ಜುಲೈ 21 ರಂದು ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿತ್ತು. ವಾರಣಾಸಿಯ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಎರಡೂ ಕಡೆಯ ವಾದ ಆಲಿಸಿದ ಬಳಿಕ ತೀರ್ಪನ್ನು ಜುಲೈ 21ಕ್ಕೆ ಕಾಯ್ದಿರಿಸಿದ್ದರು.


ವುಜುಖಾನಾ ಹೊರತುಪಡಿಸಿ ಇಡೀ ಜ್ಞಾನವಾಪಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಗೆ ಹಿಂದೂ ಕಡೆಯವರು ಒತ್ತಾಯಿಸಿದ್ದರು. ಇದೇ ವೇಳೆ, ಮುಸ್ಲಿಂ ಪಕ್ಷದವರು ಮತ್ತು ಮಸೀದಿ ಸಮಿತಿಯು ಹಿಂದೂ ಪಕ್ಷದ ಈ ಬೇಡಿಕೆಯನ್ನು ವಿರೋಧಿಸಿ ತನ್ನ ಆಕ್ಷೇಪಣೆ ಸಲ್ಲಿಸಿತು.


ವಾರಣಾಸಿಯ 4 ಮಹಿಳೆಯರ ಪರವಾಗಿ ಈ ಬೇಡಿಕೆಯನ್ನು ಮಾಡಲಾಗಿದೆ, ಅವರ ಹೆಸರುಗಳೆಂದರೆ- ಲಕ್ಷ್ಮಿ ದೇವಿ, ಸೀತಾ ಸಾಹು, ಮಂಜು ವ್ಯಾಸ್ ಮತ್ತು ರೇಖಾ ಪಾಠಕ್. ಈ ಮಹಿಳೆಯರು ಮೇ 16ರಂದು ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಬುಜುಖಾನ ಹೊರತುಪಡಿಸಿ ಎಲ್ಲ ಪ್ರದೇಶಗಳ ಸಮೀಕ್ಷೆ ನಡೆಸುವಂತೆ ಮನವಿ ಮಾಡಿದ್ದರು.


ಜುಲೈ 14 ರಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್, 'ವಜುಖಾನೆ ಹೊರತುಪಡಿಸಿ ಇಡೀ ಜ್ಞಾನವಾಪಿ ಸಂಕೀರ್ಣದ ಪುರಾತತ್ವ ಮತ್ತು ವೈಜ್ಞಾನಿಕ ತನಿಖೆಗೆ ನಾವು ನ್ಯಾಯಾಲಯದ ಮುಂದೆ ಬೇಡಿಕೆ ಇಟ್ಟಿದ್ದೇವೆ' ಎಂದಿದ್ದರು. ಇದೀಗ ಎರಡೂ ಕಡೆಯವರ ವಾದವನ್ನು ಆಲಿಸಿದ ತನ್ನ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.


ಇದನ್ನೂ ಓದಿ-ಜುಲೈ ಅಂತ್ಯಕ್ಕೂ ಮುನ್ನವೇ ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ, ಈ ದಿನ ಹೆಚ್ಚಾಗಲಿದೆ ವೇತನ!


ಇಡೀ ಮಸೀದಿ ಸಂಕೀರ್ಣದ ಪುರಾತತ್ವ ತನಿಖೆಯಿಂದ ಮಾತ್ರ ಕಾಶಿ ವಿಶ್ವನಾಥ ದೇಗುಲ-ಜ್ಞಾನವಾಪಿ ಮಸೀದಿ ವಿವಾದವನ್ನು ಪರಿಹರಿಸಬಹುದು ಎಂದು ಅವರು ತಮ್ಮ ವಾದದಲ್ಲಿ ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಜೈನ್ ಹೇಳಿದ್ದಾರೆ. ಪುರಾತತ್ತ್ವ ಶಾಸ್ತ್ರದ ಸಮೀಕ್ಷೆಯಿಂದ ಸಂಕೀರ್ಣಕ್ಕೆ ಹಾನಿಯಾಗಬಹುದು ಎಂದು ಮುಸ್ಲಿಂ ಕಡೆಯವರು ನ್ಯಾಯಾಲಯದ ಮುಂದೆ ತಮ್ಮ ವಾದ ಮಂಡಿಸಿದ್ದಾರೆ, ಬಳಿಕ ನಾವು ನ್ಯಾಯಾಲಯದ ಮುಂದೆ ಸಂಕೀರ್ಣಕ್ಕೆ ಹಾನಿಯಾಗದಂತೆ ಆಧುನಿಕ ತನಿಖೆಯ ವಿಧಾನವನ್ನು ಕೋರಿದ್ದೇವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ-Modi Government: ಟೊಮೆಟೊ ದರಕ್ಕೆ ಸಂಬಂಧಿಸಿದಂತೆ ಶ್ರೀಸಾಮಾನ್ಯರಿಗೆ ಮತ್ತೊಂದು ನೆಮ್ಮದಿಯ ಸುದ್ದಿ ನೀಡಿದ ಕೇಂದ್ರ ಸರ್ಕಾರ!


ಮೇ 22 ರಂದು, ಮುಸ್ಲಿಂ ಕಡೆಯವರು ವಾರಣಾಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಜ್ಞಾನವಾಪಿ ಮಸೀದಿಯ ಸಂಪೂರ್ಣ ಸಂಕೀರ್ಣವನ್ನು ಸಮೀಕ್ಷೆ ಮಾಡುವಂತೆ ಒತ್ತಾಯಿಸಿದೆ. 


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.