ರಾಜ್ಯ ಸರ್ಕಾರದ ಪ್ಯಾಕೇಜ್ ಬಗ್ಗೆ ವಿವಿಧ ಸಮುದಾಯಗಳವರ ಅಸಮಾಧಾನ: ಸಿದ್ದರಾಮಯ್ಯ ಭೇಟಿಯಾದ ಮುಖಂಡರು

ಕಬ್ಬಿಣ ಕೆಲಸಗಾರರು, ಕಲ್ಲಿನ ವಿಗ್ರಹ ತಯಾರು ಮಾಡುವವರು, ಚಿನ್ನ, ಬೆಳ್ಳಿ ಕೆಲಸದಲ್ಲಿರುವವರು, ಎರಕದ ಕೆಲಸಗಾರರಿಗೆ ವಿಶೇಷ ಪ್ಯಾಕೇಜ್. 

Last Updated : May 7, 2020, 03:58 PM IST
ರಾಜ್ಯ ಸರ್ಕಾರದ ಪ್ಯಾಕೇಜ್ ಬಗ್ಗೆ ವಿವಿಧ ಸಮುದಾಯಗಳವರ ಅಸಮಾಧಾನ: ಸಿದ್ದರಾಮಯ್ಯ ಭೇಟಿಯಾದ ಮುಖಂಡರು title=

ಬೆಂಗಳೂರು: ಜೀವನೋಪಾಯಕ್ಕೆ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿರುವ ವಿವಿಧ ಸಮುದಾಯಗಳ ಮುಖಂಡರು ಇಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿಯಾಗಿ ರಾಜ್ಯ ಸರ್ಕಾರ ಕೊರೊನಾ ಮತ್ತು ಲಾಕ್ಡೌನ್ ಹಿನ್ನೆಲೆಯಲ್ಲಿ ಘೋಷಿಸಿರುವ ಪ್ಯಾಕೇಜ್‍ ಬಗ್ಗೆ ಮತ್ತು ತಮ್ಮ ಸಮುದಾಯಗಳನ್ನು ಕಡೆಗಣಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅಖಿಲ ಕರ್ನಾಟಕ ಗಾಣಿಗ ಮಹಾಸಭಾ, ಶ್ರೀ ಭಾವಸಾರ ಕ್ಷತ್ರಿಯ ಸಮಾಜ (ದರ್ಜಿಗಳು), ಶ್ರೀ ವಿಶ್ವಕರ್ಮ ಸೇವಾ ಸಮಿತಿ, ಶ್ರೀ ಸೋಮವಂಶ ಆರ್ಯ ಕ್ಷತ್ರಿಯ ಸೇವಾ ಸಂಘ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಮಹಾ ಒಕ್ಕೂಟ, ಅಲೆಮಾರಿಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಪತ್ರಗಳನ್ನು ಸಲ್ಲಿಸಿದರು.

ವಿದ್ಯುತ್ ಮಗ್ಗ ನೇಕಾರರು, ಗಾಣಿಗರು, ಕುಂಬಾರ, ಕಮ್ಮಾರ, ಮೇದರು, ದರ್ಜಿಗಳು, ವಿಶ್ವಕರ್ಮ, ಅಲೆಮಾರಿಗಳು, ಬುಡಕಟ್ಟು ಸಮುದಾಯ, ಉಪ್ಪಾರರು, ಅರ್ಚಕರು, ಮಂಗಳವಾದ್ಯ ನುಡಿಸುವವರು, ಕಲಾವಿದರು, ಛಾಯಾಗ್ರಾಹಕರನ್ನು ಕೊರೊನಾ ಪ್ಯಾಕೇಜ್‍ನಲ್ಲಿ ಸೇರಿಸದಿರುವ ಅಸಮಾಧಾನ ವ್ಯಕ್ತಪಡಿಸಿದರು.

ಕಬ್ಬಿಣ ಕೆಲಸಗಾರರು, ಕಲ್ಲಿನ ವಿಗ್ರಹ ತಯಾರು ಮಾಡುವವರು, ಚಿನ್ನ, ಬೆಳ್ಳಿ ಕೆಲಸದಲ್ಲಿರುವವರು, ಎರಕದ ಕೆಲಸಗಾರರಿಗೆ ವಿಶೇಷ ಪ್ಯಾಕೇಜ್. 

ಮರಗೆಲಸ, ಗೊಂಬೆಗಳಿಗೆ ಬಣ್ಣ ಹಚ್ಚುವವರು, ಕರಕುಶಲ ಕೆಲಸದವರು, ಟೈಲರ್ ಗಳನ್ನು ಪ್ಯಾಕೇಜ್‍ನಲ್ಲಿ ಸೇರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುವಂತೆ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡರು.

ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್‍ನಲ್ಲಿ ಸವಿತಾ ಸಮಾಜ, ನೇಕಾರರು ಹಾಗೂ ಮಡಿವಾಳ ಸಮುದಾಯದವರಿಗೆ ಮಾತ್ರ ನೆರವು ಘೋಷಣೆ ಮಾಡಿದ್ದಾರೆ. ಆದರೆ, ಆ ವರ್ಗದವರಿಗೂ  ನೆರವು ಸೂಕ್ತ ಪ್ರಮಾಣದಲ್ಲಿ ಸಿಕ್ಕಿಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಸರ್ಕಾರ ತಮ್ಮ ಸಮುದಾಯದವರಿಗೆ ನೆರವು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸವಿತಾ ಸಮಾಜ, ನೇಕಾರರು ಹಾಗೂ ಮಡಿವಾಳ ಸಮುದಾಯದವರು ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನೂ ಸಲ್ಲಿಸಿದರು. ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮಿನಾರಾಯಣ ಉಪಸ್ಥಿತರಿದ್ದರು.

Trending News