ತಿರುವನಂತಪುರ : ಕಾಂಗ್ರೆಸ್ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆಗೆ ತರಕಾರಿ ವ್ಯಾಪಾರಿಯೊಬ್ಬ ದೇಣಿಗೆ ನೀಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವ್ಯಾಪಾರಸ್ಥನಿಗೆ ಬೆದರಿಕೆ ಹಾಕಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆ ಕೇರಳ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೆ ಇಂತಹ ಘಟನೆ ನಡೆದಿದ್ದು, ವಿರೋಧ ಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೊ ಯಾತ್ರೆಗೆ ದೇಣಿಗೆ ನೀಡುವಂತೆ ವ್ಯಾಪಾರಿಯನ್ನು ಕೇಳಿದ್ದಾರೆ. ಆಗ ಅವರು 500 ರೂ. ನೀಡಿದ್ದರಂತೆ. ಆದ್ರೆ, 2000 ರೂ. ನೀಡುವಂತೆ ಕೈ ಕಾರ್ಯಕರ್ತರು ಬೇಡಿಕೆಯಿಟ್ಟಿದ್ದರು. ಇದಕ್ಕೆ ವ್ಯಾಪಾರಿ ಒಪ್ಪದ ಹಿನ್ನೆಲೆ ಕೋಪಗೊಂಡ ಅವರು ತರಕಾರಿಯನ್ನು ಎಸೆದಾಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: PM Kisan ರೈತರಿಗೆ ಸಿಹಿ ಸುದ್ದಿ : ಈ ದಿನ ನಿಮ್ಮ ಖಾತೆಗೆ ಬರಲಿದೆ 12ನೇ ಕಂತಿನ ಹಣ!
Kerala | Vegetable shop owner threatened by Congress workers for not contributing Rs 2000 in fund collection for 'Bharat Jodo Yatra' in Kollam
(Photo source: Screenshot from viral video) pic.twitter.com/vzQaRWqwiB
— ANI (@ANI) September 16, 2022
ಇನ್ನು ತರಕಾರಿ ಅಂಗಡಿ ಮಾಲೀಕ ಎಸ್.ಫವಾಜ್ ಕುನ್ನಿಕೋಡು ಎಂದು ತಿಳಿದು ಬಂದಿದ್ದು, ಈ ಕುರಿತು ಫವಾಜ್ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಕೇರಳ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಅನೀಶ್ ಖಾನ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
From Gandhigiri to Goondagiri - what a fall for the Congress.#BharatTodoYatra pic.twitter.com/xLWpyKRJR9
— BJP Karnataka (@BJP4Karnataka) September 16, 2022
ಸದ್ಯ ಈ ಘಟನೆ ವಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ತರಕಾರಿ ವ್ಯಾಪಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿರುವ ವಿಡಿಯೊ ಹಂಚಿಕೊಂಡು ʼಗಾಂಧಿಗಿರಿಯಿಂದ ಗೂಂಡಾಗಿರಿಗೆ -ಕಾಂಗ್ರೆಸ್‌ಗೆ ಎಂತಹ ಸ್ಥಿತಿ ಬಂದಿದೆ’ ಎಂದು ಟ್ವೀಟ್ ಮಾಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.