ʼಭಾರತ್ ಜೋಡೊ ಯಾತ್ರೆʼಗೆ ದೇಣಿಗೆ ನೀಡದ ತರಕಾರಿ ವ್ಯಾಪಾರಿ ಮೇಲೆ ಹಲ್ಲೆ..!
ಕಾಂಗ್ರೆಸ್ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆಗೆ ತರಕಾರಿ ವ್ಯಾಪಾರಿಯೊಬ್ಬ ದೇಣಿಗೆ ನೀಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವ್ಯಾಪಾರಸ್ಥನಿಗೆ ಬೆದರಿಕೆ ಹಾಕಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ತಿರುವನಂತಪುರ : ಕಾಂಗ್ರೆಸ್ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆಗೆ ತರಕಾರಿ ವ್ಯಾಪಾರಿಯೊಬ್ಬ ದೇಣಿಗೆ ನೀಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವ್ಯಾಪಾರಸ್ಥನಿಗೆ ಬೆದರಿಕೆ ಹಾಕಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆ ಕೇರಳ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೆ ಇಂತಹ ಘಟನೆ ನಡೆದಿದ್ದು, ವಿರೋಧ ಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೊ ಯಾತ್ರೆಗೆ ದೇಣಿಗೆ ನೀಡುವಂತೆ ವ್ಯಾಪಾರಿಯನ್ನು ಕೇಳಿದ್ದಾರೆ. ಆಗ ಅವರು 500 ರೂ. ನೀಡಿದ್ದರಂತೆ. ಆದ್ರೆ, 2000 ರೂ. ನೀಡುವಂತೆ ಕೈ ಕಾರ್ಯಕರ್ತರು ಬೇಡಿಕೆಯಿಟ್ಟಿದ್ದರು. ಇದಕ್ಕೆ ವ್ಯಾಪಾರಿ ಒಪ್ಪದ ಹಿನ್ನೆಲೆ ಕೋಪಗೊಂಡ ಅವರು ತರಕಾರಿಯನ್ನು ಎಸೆದಾಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: PM Kisan ರೈತರಿಗೆ ಸಿಹಿ ಸುದ್ದಿ : ಈ ದಿನ ನಿಮ್ಮ ಖಾತೆಗೆ ಬರಲಿದೆ 12ನೇ ಕಂತಿನ ಹಣ!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.