ನವದೆಹಲಿ: ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧದ ಯೋಜಿತ ಉಪವಾಸ ಸತ್ಯಾಗ್ರಹವನ್ನು ರದ್ದುಪಡಿಸಿದ್ದಾರೆ.ಬಿಜೆಪಿಯ ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಅವರು ಇಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.


COMMERCIAL BREAK
SCROLL TO CONTINUE READING

'ನಾನು ಬಹಳ ಸಮಯದಿಂದ ವಿವಿಧ ವಿಷಯಗಳ ಬಗ್ಗೆ ಆಂದೋಲನ ಮಾಡುತ್ತಿದ್ದೇನೆ.ಶಾಂತಿಯುತವಾಗಿ ಪ್ರತಿಭಟಿಸುವುದು ಅಪರಾಧವಲ್ಲ..ನಾನು ಮೂರು ವರ್ಷಗಳಿಂದ ರೈತರ ಸಮಸ್ಯೆಯನ್ನು ಎತ್ತುತ್ತಿದ್ದೇನೆ...ಅವರು ತಮ್ಮ ಬೆಳೆಗಳಿಗೆ ಸರಿಯಾದ ಬೆಲೆ ಸಿಗದ ಕಾರಣ ಅವರು ಆತ್ಮಹತ್ಯೆಯಿಂದ ಸಾಯುತ್ತಾರೆ..ಶೇ 50 ರಷ್ಟು ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.ಈ ಬಗ್ಗೆ ನನಗೆ ಪತ್ರ ಸಿಕ್ಕಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.


ಇದನ್ನೂ ಓದಿ: ಶಶಿ ತರೂರ್ ಹಾಗೂ ಆರು ಪತ್ರಕರ್ತರ ವಿರುದ್ಧ ದೇಶ ದ್ರೋಹದ ಕೇಸ್ ದಾಖಲು


'ಈ 15 ವಿಷಯಗಳ ಬಗ್ಗೆ  ಕೇಂದ್ರವು ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದ್ದರಿಂದ, ನಾಳೆಯ ಉಪವಾಸವನ್ನು ನಾನು ರದ್ದುಗೊಳಿಸಿದ್ದೇನೆ" ಎಂದು ಅವರು ಹೇಳಿದರು.ಈ ತಿಂಗಳ ಆರಂಭದಲ್ಲಿ, 83 ವರ್ಷದ ಅಣ್ಣಾ ಹಜಾರೆ(Anna Hazare) ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಜನವರಿ ಅಂತ್ಯದ ವೇಳೆಗೆ ತಮ್ಮ ಜೀವನದ ಕೊನೆಯ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುವುದಾಗಿ ಹೇಳಿದ್ದರು.ಅವರು ರಾಜಧಾನಿಯ ಬಳಿ ವಾರಗಳಿಂದ ಸಾವಿರಾರು ರೈತರು ಪ್ರತಿಭಟನೆ(Farmers protest) ನಡೆಸುತ್ತಿರುವ ಕಾನೂನುಗಳು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬದ್ಧವಾಗಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.


ಇದನ್ನೂ ಓದಿ:  Anna Hazare: ರೈತರ ಪರವಾಗಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಅಣ್ಣಾ ಹಜಾರೆ..!


ರೈತರು ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಎರಡು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳು ಕಾರ್ಪೋರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.