Vice President Election 2022: ಕನ್ನಡತಿ ಮಾರ್ಗರೆಟ್ ಆಳ್ವಾ ಪ್ರತಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿ, ಶರದ್ ಪವಾರ್ ಘೋಷಣೆ
Vice President Election 2022: NDA ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ಒಂದು ದಿನ ಬಳಿಕ ವಿಪಕ್ಷಗಳೂ ಕೂಡ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿವೆ. ಮಾರ್ಗಾರೆಟ್ ಆಳ್ವಾ ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ಎಲ್ಲಾ ಪ್ರತಿಪಕ್ಷಗಳ ಸಭೆಯ ಬಳಿಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗಾರೆಟ್ ಆಳ್ವಾ ಅವರ ಹೆಸರಿನ ಘೋಷಣೆ ಮಾಡಿದ್ದಾರೆ.
Vice President Election 2022: NDA ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ಒಂದು ದಿನ ಬಳಿಕ ವಿಪಕ್ಷಗಳೂ ಕೂಡ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿವೆ. ಮಾರ್ಗಾರೆಟ್ ಆಳ್ವಾ ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ಎಲ್ಲಾ ಪ್ರತಿಪಕ್ಷಗಳ ಸಭೆಯ ಬಳಿಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗಾರೆಟ್ ಆಳ್ವಾ ಅವರ ಹೆಸರಿನ ಘೋಷಣೆ ಮಾಡಿದ್ದಾರೆ. ಇದಕ್ಕೂ ಮುನ್ನ ದೆಹಲಿಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ, ಶಿವಸೇನೆ ಮುಖಂಡ ಸಂಜಯ್ ರಾವುತ್ ಮತ್ತಿತರರು ಉಪಸ್ಥಿತರಿದ್ದರು.
Vice Presidential Election 2022: ಯಾರು ಈ ಜಗದೀಪ್ ಧನಕರ್?
ಉಪರಾಷ್ಟ್ರಪತಿ ಚುನಾವಣೆ ಯಾವಾಗ ನಡೆಯಲಿದೆ?
ಇದಕ್ಕೂ ಒಂದು ದಿನ ಮುನ್ನ ಬಿಜೆಪಿಯು ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕಡ್ ಅವರನ್ನು NDA ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಜಗದೀಪ್ ಧನ್ಕಡ್ ಅವರ ಹೆಸರನ್ನು ಘೋಷಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.
ಇದನ್ನೂ ಓದಿ-Vice President Election 2022: ಮತ್ತೊಮ್ಮೆ ಭಾರಿ ಅಚ್ಚರಿ ಮೂಡಿಸುವ ನಿರ್ಧಾರ ಕೈಗೊಂಡ ಬಿಜೆಪಿ
ಇದನ್ನೂ ನೋಡಿ-
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ