Venkaiah Naidu: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಪಾಸಿಟಿವ್
Vice President Venkaiah Naidu:ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಭಾನುವಾರ ಕೊರೊನಾ ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ.
ನವದೆಹಲಿ: ಹೈದರಾಬಾದ್‌ನಲ್ಲಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು (Vice President Venkaiah Naidu) ಅವರು ಭಾನುವಾರ ಕೊರೊನಾ ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ.
ಅವರ ಕೊರೊನಾ ಪರೀಕ್ಷೆಯ ವರದಿ ಪಾಸಿಟಿವ್ ( COVID-19 positive) ಬಂದಿದೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಒಂದು ವಾರದವರೆಗೆ ಸ್ವಯಂ-ಪ್ರತ್ಯೇಕತೆಯಲ್ಲಿರಲು ನಿರ್ಧರಿಸಿದ್ದಾರೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ತಮ್ಮನ್ನು ಪ್ರತ್ಯೇಕಿಸಲು ಮತ್ತು ಪರೀಕ್ಷಿಸಲು ಸಲಹೆ ನೀಡಿದ್ದಾರೆ.
Corona) ಪಾಸಿಟಿವ್ ಪರೀಕ್ಷೆ ನಡೆಸಿದರು. ಅವರು ಒಂದು ವಾರ ಸ್ವಯಂ-ಪ್ರತ್ಯೇಕತೆಯಲ್ಲಿರಲು (Self quarantine) ನಿರ್ಧರಿಸಿದ್ದಾರೆ. ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ತಮ್ಮನ್ನು ಪ್ರತ್ಯೇಕಿಸಲು ಮತ್ತು ಪರೀಕ್ಷಿಸಿಕೊಳ್ಳಲು ಸಲಹೆ ನೀಡಿದ್ದಾರೆ" ಎಂದು ಭಾರತದ ಉಪರಾಷ್ಟ್ರಪತಿ ಅವರ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,33,533 ಹೊಸ COVID-19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳು 21,87,205 ಕ್ಕೆ ಏರಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ತಿಳಿಸಿದೆ.
ಇದನ್ನೂ ಓದಿ: ಚಾಮರಾಜನಗರ: 79 ಶಾಲಾ ವಿದ್ಯಾರ್ಥಿಗಳು ಸೇರಿ 419 ಮಂದಿಗೆ ಕೊರೊನಾ, ಓರ್ವ ಸೋಂಕಿತ ಸಾವು
ದೈನಂದಿನ ಧನಾತ್ಮಕತೆಯ ದರ ಮತ್ತು ಸಾಪ್ತಾಹಿಕ ಧನಾತ್ಮಕತೆಯ ದರವು ಕ್ರಮವಾಗಿ ಶೇಕಡಾ 17.78 ಮತ್ತು 16.87 ರಷ್ಟಿದ್ದರೆ, ಚೇತರಿಕೆ ದರವು ಶೇಕಡಾ 93.18 ರಷ್ಟಿದೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ ಶೇಕಡಾ 5.57 ರಷ್ಟಿದೆ. ಇದರೊಂದಿಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 3,92,37,264 ಕ್ಕೆ ಏರಿಕೆಯಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.