ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತಮ್ಮ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ. ಹಾಗಾಗಿಯೇ ಎಷ್ಟೇ ಕಾರ್ಯದ ಒತ್ತಡವಿದ್ದರೂ ಸಹ ಯೋಗ, ವ್ಯಾಯಾಮವನ್ನು ಎಂದಿಗೂ ತಪ್ಪಿಸುವುದಿಲ್ಲ. ಹಾಗೆಯೇ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆಯೂ ಹಲವು ಬಾರಿ ಜನತೆಗೆ ಸಲಹೆ ನೀಡಿದ್ದಾರೆ. ಅಲ್ಲದೆ, ಅವರು ನುಡಿದಂತೆ ನಡೆಯುತ್ತಾರೆ ಎಂಬುದಕ್ಕೆ ಈ ವೀಡಿಯೋ ನಿಜಕ್ಕೂ ಉತ್ತಮ ನಿದರ್ಶನ!


COMMERCIAL BREAK
SCROLL TO CONTINUE READING

ಗುಜರಾತ್'ನ ಕೆವಾಡಿಯಾ ಗ್ರಾಮದಲ್ಲಿ ಡಿಸೆಂಬರ್ 20ರಿಂದ ಆರಂಭವಾಗಿರುವ ಪೊಲೀಸ್ ಮಹಾನಿರ್ದೇಶಕರ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಮೋದಿ ಅವರು, ರಾಜ್ಯ ರಾಜಧಾನಿ ಗಾಂಧಿನಗರದಲ್ಲಿ ಮುಂಜಾನೆ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಹೈ ಸೆಕ್ಯೂರಿಟಿಯೊಂದಿಗೆ ವಿವಿಐಪಿ ಸರ್ಕಿಟ್ ಹೌಸ್'ನಿಂದ ಸ್ಟ್ಯಾಚ್ಯೂ ಆಫ್ ಲಿಬರ್ಟಿವರೆಗೆ ವಾಕಿಂಗ್ ಮಾಡಿದರು. ರಸ್ತೆಯಲ್ಲಿ ಪ್ರಧಾನಿ ಮೋದಿ ಅವರನ್ನು ನೋಡಿ ಸಂತಸಗೊಂಡ ಜನತೆ ಗುಡ್ ಮಾರ್ನಿಂಗ್ ಹೇಳಿದರು. 



ಈ ವೀಡಿಯೋವನ್ನು ಬಿಜೆಪಿ ಸೋಶಿಯಲ್ ಮೀಡಿಯಾ ರಾಷ್ಟ್ರೀಯ ಉಸ್ತುವಾರಿ ಪ್ರೀತಿ ಗಾಂಧಿ ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.