ಮುಂಬೈ: ಇಲ್ಲಿನ ಚಲಿಸುತ್ತಿರುವ ಸ್ಥಳೀಯ ರೈಲಿನಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಮೇಲೆ ಗುರುವಾರರಾತ್ರಿ ದೌರ್ಜನ್ಯ ನಡೆಸಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. 


COMMERCIAL BREAK
SCROLL TO CONTINUE READING

ಮುಂಬೈನ ಕಲ್ಯಾಣ್ ಮತ್ತು ದಾದರ್ ನಡುವೆ ಚಲಿಸುತ್ತಿದ್ದ ಸ್ಥಳೀಯ ರೈಲಿನ ವಿಕಲಚೇತನರ ಭೋಗಿಯಲ್ಲಿ ಗುರುವಾರ ರಾತ್ರಿ 11ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿ ಮತ್ತು ದೌರ್ಜನ್ಯಕ್ಕೊಳಗಾದ ಮಹಿಳೆ ಇಬ್ಬರೂ ಪರಿಚಸ್ಥರಾಗಿದ್ದು, ಕುಡಿದ ಮತ್ತಿನಲ್ಲಿದ ಆತ ವಿನಾಕಾರಣ ಆಕೆಯ ಕೂದಲು ಹಿಡಿದು ಎಳೆದಾಡಿದ್ದಲ್ಲದೆ, ಆಕೆಯ ಮೇಲೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿದ್ದಾನೆ.

ಈ ಸಂದರ್ಭದಲ್ಲಿ ಸಹ ಪ್ರಯಾಣಿಕರು ಮತ್ತು ಅಲ್ಲಿದ್ದ ರಕ್ಷಣಾ ಸಿಬ್ಬಂದಿ ಎಷ್ಟೇ ಎಚ್ಚರಿಕೆ ನೀಡಿದರೂ ಆತ ನಿಲ್ಲಿಸದೆ ತನ್ನ ಕ್ರೌರ್ಯ ಮೆರೆದಿದ್ದಾನೆ. ಹಲ್ಲೆ ನಡೆಸಿದ ಆರೋಪಿಯನ್ನು ರಫೀಕ್ ಅಲಿ ಎಂದು ಗುರುತಿಸಲಾಗಿದ್ದು, ಈ ಘಟನೆಯನ್ನು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇತರ ಪ್ರಯಾಣಿಕರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಆರಂಭಿಸಿದ್ದಾರೆ.