ನವದೆಹಲಿ: ಪಶ್ಚಿಮ ದೆಹಲಿಯ ಹರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಪರ್ಸ್ ಕದ್ದಿದ್ದ ಯುವಕನನ್ನು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಿಸಿಟಿವಿ ದೃಶ್ಯಾವಳಿಯಲ್ಲಿ ಪರ್ಸ್ ಕದ್ದಿದ್ದ ಯುವಕನ ಬೈಕ್ ನಂಬರ್ ಆಧಾರದ ಮೇಲೆ ಬೆನ್ನತ್ತಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಹಿಳೆಯರು ಒಬ್ಬಂಟಿಯಾಗಿ ಹೋಗುವುದನ್ನೇ ಕಾಯುತ್ತಿದ್ದ ಆರೋಪಿ, ಬೈಕ್ ನಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಮಹತ್ಕಾರ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪರ್ಸ್ ಕದಿಯಲು ಈತ ಹೊಂಚು ಹಾಕಿದ ರೀತಿಯನ್ನು ನೀವೂ ವೀಕ್ಷಿಸಿ...



ಬಂಧಿತ ಆರೋಪಿಯನ್ನು ವಿಷ್ಣು ಉದ್ಯಾನವನದಲ್ಲಿ ವಾಸಿಸುವ ಸಿಮ್ರಾಂಜಿತ್ ಎಂದು ಗುರುತಿಸಲಾಗಿದೆ. ಈಗಾಗಲೇ ಈತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಜನಕ್‌ಪುರಿ ಮತ್ತು ಪಂಜಾಬಿ ಬಾಗ್ ಠಾಣೆ ವ್ಯಾಪ್ತಿಯಲ್ಲಿನ ಪ್ರಕರಣಗಳ ಬಗ್ಗೆಯೂ ಪೊಲೀಸರಿಗೆ ಮಾಹಿತಿ ದೊರೆತಿದೆ.


ಆರೋಪಿ ಸಿಮ್ರಾಂಜಿತ್ ಮಾದಕ ವ್ಯಸನಿಯಾಗಿದ್ದು, ಇದೇ ಕಾರಣಕ್ಕಾಗಿ ಕಳ್ಳತನ ಮಾಡುತ್ತಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.