ವಿದ್ಯಾಸಿರಿ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ (Vidyasiri scheme)-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ (Vidyasiri scheme)-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: 'Bulli Bai' app case: ಬುಲ್ಲಿ ಬಾಯಿ ಆ್ಯಪ್ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರೆಷ್ಟು?
ಈ ಮೊದಲು ಅರ್ಜಿ ಸಲ್ಲಿಸಲು ಫೆ.28 ಕ್ಕೆ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿತ್ತು.ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಇದನ್ನೂ ಓದಿ: 'Bulli Bai' app case: ಬುಲ್ಲಿ ಬಾಯಿ ಆ್ಯಪ್ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರೆಷ್ಟು?
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ:www.ssp.postmatric.karnataka.gov.in ಕ್ಕೆ ಭೇಟಿ ನೀಡಬೇಕು. ಕಾರ್ಯಕ್ರಮಗಳ ವಿವರ,ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಇದನ್ನೂ: ದೆಹಲಿಯಲ್ಲಿ ಈಗ ಮೂರನೇ ಕೊರೊನಾ ಅಲೆ ಜಾರಿಯಲ್ಲಿದೆ- ಸತ್ಯೆಂದರ್ ಜೈನ್
ಇಲಾಖಾ ಸಹಾಯವಾಣಿ ಸಂಖ್ಯೆ 8050770005, 8050770004, ಇ-ಮೇಲ್ ವಿಳಾಸ: bcwd.scholarship@karnataka.gov.in ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂ: 080-35254757, ಇ-ಮೇಲ್ ವಿಳಾಸ: postmatrichelp@karnataka.gov.in ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಎಂ. ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.