ನವದೆಹಲಿ: ಈಚೆಗಷ್ಟೇ ನಟಿ ಖುಷ್ಬೂ ಸುಂದರ್​ ಅವರು ಕಾಂಗ್ರೆಸ್  ತೊರೆದು ಬಿಜೆಪಿ ಸೇರಿರುವ ಬೆನ್ನಲ್ಲೇ ಇದೀಗ ಮತ್ತೋರ್ವ ಪ್ರಸಿದ್ಧ ನಟಿ, ಮಾಜಿ ಸಂಸದೆ ವಿಜಯಶಾಂತಿ ಅವರು ಬಿಜೆಪಿ ಸೇರ್ಪಡೆಗೊಳ್ಳುವುದು ಖಚಿತವಾಗಿದ್ದು, ನಾಳೆ ಬಿಜೆಪಿಗೆ ಸೇರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ


COMMERCIAL BREAK
SCROLL TO CONTINUE READING

ವಿಜಯಶಾಂತಿ(Vijayashanti) ಅವರು ಕಾಂಗ್ರೆಸ್​ನ ಸಂಸದೆಯಾಗಿದ್ದರು, ಕಾಂಗ್ರೆಸ್​ನ 'ಸ್ಟಾರ್ ಪ್ರಚಾರಕಿ' ಎಂದೇ ಗುರುತಿಸಿಕೊಂಡವರು. ಇವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಕೆಲವು ತಿಂಗಳಿನಿಂದ ಸುದ್ದಿ ಹರಿದಾಡಿತ್ತು. ಆದರೆ ಇದೀಗ ಇದು ಬಹುತೇಕ ಖಚಿತವಾಗಿದ್ದು, ನಾಳೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.


ಭಾರತದಲ್ಲಿ ಫೆಬ್ರುವರಿವರೆಗೆ Corona Vaccine ಸಿಗುವ ಸಾಧ್ಯತೆ, ಬೆಲೆ ಎಷ್ಟು ಇಲ್ಲಿದೆ ವಿವರ


ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್​ನ (GHMS) 150 ವಾರ್ಡ್​ಗಳಿಗೆ ಬರುವ ಡಿಸೆಂಬರ್​ 1ರಿಂದ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿಯೇ ವಿಜಯಶಾಂತಿಯವರು ಬಿಜೆಪಿ ಸೇರುವ ಮೂಲಕ ಪಕ್ಷದ ಪ್ರಚಾರಕ್ಕೆ ಆನೆಬಲ ಬಂದಂತಾಗಿದೆ ಎಂದು ಹೇಳಲಾಗುತ್ತಿದೆ. ಮತ್ತೆ ವಿಜಯಶಾಂತಿ ಅವರಿಗೆ ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನ ಸಿಗಲಿದೆ ಎಂಬ ಮಾಹಿತಿ ಕೂಡ ಕೇಳಿಬಂದಿದೆ.


ನೀವು ಧರಿಸುತ್ತಿರುವ Mask ಅಸಲಿಯೇ/ನಕಲಿಯೇ ಎಂದು ಹೀಗೆ ತಿಳಿಯಿರಿ


ಇತ್ತೀಚಿಗೆ ಕೊಪ್ಪಳದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ 'ಅನೇಕ ಬಿಜೆಪಿಗರು ಕಾಂಗ್ರೆಸ್​ ಸೇರುವ ದಿನ ದೂರವಿಲ್ಲ ಎಂದು ಹೇಳಿದ್ದರು. ಆದ್ರೆ ವಿಜಯಶಾಂತಿ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಿರುವದು ಡಿಕೆಶಿ ಹೇಳಿಕೆಗೆ ಉಲ್ಟಾ ಆಗುತ್ತಿದೆ.