ಪ್ರಯಾಗರಾಜ್: ಉತ್ತರಪ್ರದೇಶದಲ್ಲಿ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ನಡುವೆಯೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಇಬ್ಬರು ಮಕ್ಕಳ ತಂದೆಗೆ ಗ್ರಾಮಸ್ಥರು ಸರಿಯಾದ ಪಾಠ ಕಲಿಸಿದ ಘಟನೆ ಪ್ರಯಾಗರಾಜ್ ಜಿಲ್ಲೆಯ ಖಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಾಲ್ತಾರಾ ಪ್ರದೇಶದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಇಲ್ಲಿನ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಕೂಡಿಹಾಕಿ ಅತ್ಯಾಚಾರ ಎಸಗಲು ಪ್ರಯತ್ನಿಸಿದ ಇಬ್ಬರು ಮಕ್ಕಳ ತಂದೆಯನ್ನು ವಶಕ್ಕೆ ಪಡೆದ ಗ್ರಾಮಸ್ಥರು ಆತನ ಮುಖಕ್ಕೆ ಮಸಿ ಬಳಿದು, ಬಟ್ಟೆ ಕಳಚಿ, ಚಪ್ಪಲಿ ಹಾರ ಹಾಕಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ತಕ್ಕ ಪಾಠ ಕಲಿಸಿದ್ದಾರೆ.


ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ವಶಕ್ಕೆ ಪಡೆಯಲು ಯತ್ನಿಸಿದರಾದರೂ ಇದಕ್ಕೆ ಅವಕಾಶ ಕೊಡದ ಗ್ರಾಮಸ್ಥರು ಆರೋಪಿಗೆ ಚಪ್ಪಲಿ ಹಾರ ಹಾಕಿ ಊರಿನ ತುಂಬಾ ಮೆರವಣಿಗೆ ಮಾಡಿದ್ದಾರೆ.


ಗ್ರಾಮಸ್ಥರ ಮಾಹಿತಿಯ ಆಧಾರದ ಮೇಲೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಮಗುವನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.