'ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ'

ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ಮುಖ್ಯಸ್ಥರು ಮಾನವೀಯತೆಯನ್ನು ಕಾಪಾಡಲು ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವ ಅಗತ್ಯವನ್ನು ಒತ್ತಿ ಹೇಳಿದರು.

Written by - Zee Kannada News Desk | Last Updated : Apr 29, 2022, 05:46 PM IST
  • ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ವಿವಿಧ ಗುಂಪುಗಳ ನಡುವೆ ಘರ್ಷಣೆಗಳು ನಡೆದಿರುವ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥರು ಈ ಹೇಳಿಕೆ ನೀಡಿದ್ದಾರೆ.
'ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ' title=

ಅಮರಾವತಿ (ಮಹಾರಾಷ್ಟ್ರ): ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ಮುಖ್ಯಸ್ಥರು ಮಾನವೀಯತೆಯನ್ನು ಕಾಪಾಡಲು ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ವಿವಿಧ ಗುಂಪುಗಳ ನಡುವೆ ಘರ್ಷಣೆಗಳು ನಡೆದಿರುವ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥರು ಈ ಹೇಳಿಕೆ ನೀಡಿದ್ದಾರೆ.

ಮೋಹನ್ ಭಾಗವತ್ ಅವರು ಮಹಾರಾಷ್ಟ್ರದ ಭಂಖೇಡಾ ರಸ್ತೆಯಲ್ಲಿರುವ ಕನ್ವರ್ರಾಮ್ ಧಾಮದಲ್ಲಿ ಸಂತ ಕನ್ವರ್ರಾಮ್ ಅವರ ಮರಿ ಮೊಮ್ಮಗ ಸಾಯಿ ರಾಜೇಶ್‌ಲಾಲ್ ಮೊರ್ದಿಯಾ ಅವರ `ಗದ್ದಿನಾಶಿನಿ~ ಕಾರ್ಯಕ್ರಮದಲ್ಲಿ (ಧಾರ್ಮಿಕ ಸ್ಥಾನವನ್ನು ಸ್ವೀಕರಿಸುವ ಸಮಾರಂಭ) ಮುಖ್ಯ ಅತಿಥಿಯಾಗಿ ಮಾತನಾಡಿದರು.

ಇದನ್ನೂ ಓದಿ: ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡುವುದಕ್ಕೆ ಮೀನಾಮೇಷ ಮಾಡಬಾರದು- ಬಿ.ಕೆ.ಹರಿಪ್ರಸಾದ್

"ಹಿಂಸೆಯಿಂದ ಯಾರಿಗೂ ಪ್ರಯೋಜನವಿಲ್ಲ. ಹಿಂಸೆ ಪ್ರಿಯವಾಗಿರುವ ಸಮಾಜ ಈಗ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ನಾವು ಎಂದೆಂದಿಗೂ ಅಹಿಂಸಾತ್ಮಕ ಮತ್ತು ಶಾಂತಿ-ಪ್ರೇಮಿಗಳಾಗಿರಬೇಕು. ಇದಕ್ಕಾಗಿ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವುದು ಮತ್ತು ಮಾನವೀಯತೆಯನ್ನು ಕಾಪಾಡುವುದು ಅತ್ಯಗತ್ಯ" ಎಂದು ಅವರು ಹೇಳಿದ್ದಾರೆ.

ಸಮಾಜದಲ್ಲಿ ಶಾಂತಿಯನ್ನು ಪ್ರತಿಪಾದಿಸಿದ ಭಾಗವತ್, "ಮಾನವೀಯತೆಯನ್ನು ಕಾಪಾಡಲು ನಾವೆಲ್ಲರೂ ಅಹಿಂಸೆಯ ಮಾರ್ಗವನ್ನು ಅನುಸರಿಸಬೇಕು. ಈ ಮಾರ್ಗಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು" ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ‘ಗೃಹ ಸಚಿವ ಆರಗ ಜ್ಞಾನೇಂದ್ರ ಗಾಂಜಾ ಸೇವಿಸುತ್ತಾರೆ!’

ಸಿಂಧಿ ಭಾಷೆ ಮತ್ತು ಸಂಸ್ಕೃತಿಯ ಉಳಿವನ್ನು ಖಚಿತಪಡಿಸಿಕೊಳ್ಳಲು ದೇಶದಲ್ಲಿ ಸಿಂಧಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳಿರುವ ಆರ್‌ಎಸ್‌ಎಸ್ ಮುಖ್ಯಸ್ಥರು, ಭಾರತವು ಬಹುಭಾಷಾ ದೇಶವಾಗಿದೆ ಮತ್ತು ಪ್ರತಿಯೊಂದು ಭಾಷೆಗೂ ತನ್ನದೇ ಆದ ಪ್ರಾಮುಖ್ಯತೆ ಇದೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News