ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹಿಂಸಾಚಾರ
ಮುಂಬರುವ ದಿನಗಳಲ್ಲಿ ದೆಹಲಿ ವಿಧಾನಸಭಾ ಚುನಾವಣೆಗೆ ಹೋಗುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇಂತಹ ಹಿಂಸಾಚಾರ ನಡೆಸಲಾಗುತ್ತಿದೆ. ಅಂತಹ ಜನರ ಆಶಯಗಳು ಯಶಸ್ವಿಯಾಗಲು ಬಿಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ದೆಹಲಿಯ ಹಲವಾರು ಪ್ರದೇಶಗಳಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಿಎಂ ಅರವಿಂದ ಕೇಜ್ರಿವಾಲ್(Arvind Kejriwal) ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ವಿರೋಧ ಪಕ್ಷದ ಜನರು ದೆಹಲಿಯ ವಾತಾವರಣವನ್ನು ಹಾಳು ಮಾಡುವ ಉದ್ದೇಶದಿಂದ ವಿರೋಧ ಪಕ್ಷಗಳು ಈ ರೀತಿಯ ಪರಿಸ್ಥಿತಿಯನ್ನು ಸೃಷ್ಟಿಮಾಡಿವೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತ್ರಿಲೋಕ್ ಪುರಿ ಮತ್ತು ಬವಾನಾದಲ್ಲಿ ಇಂತಹ ಹಿಂಸಾಚಾರ ನಡೆದಿತ್ತು ಎಂಬುದನ್ನು ನೆನೆದ ಕೇಜ್ರಿವಾಲ್, ಗಲಭೆಯಿಂದ ಲಾಭ ಪಡೆಯುವವನು ಗಲಭೆ ಮಾಡುತ್ತಾನೆ. ಆದರೆ ನಮ್ಮ ಪಕ್ಷವು ಗಲಭೆಯಿಂದ ನಷ್ಟವನ್ನು ಅನುಭವಿಸುತ್ತದೆ ಎಂದು ಹೇಳಿದರು.
ಹಿಂಸಾಚಾರ ಭುಗಿಲೇಳಲು ವಿರೋಧ ಪಕ್ಷಗಳೇ ಕಾರಣ:
'ಯಾವುದೇ ವಿಚಾರದ ಕುರಿತು ವಿರೋಧ ವ್ಯಕ್ತಪಡಿಸುವ ಹಕ್ಕು ಪ್ರತಿಯೊಬ್ಬ ವ್ಯಕ್ತಿಗೂ ಇದೆ. ಆದರೆ ಪ್ರತಿಭಟನೆಗಳು ಸಂವಿಧಾನದ ವ್ಯಾಪ್ತಿಯಲ್ಲಿ ಮತ್ತು ಅಹಿಂಸಾತ್ಮಕವಾಗಿ ನಡೆಯಬೇಕು. ಹಿಂಸಾಚಾರಕ್ಕೆ ಯಾರನ್ನೂ ಅನುಮತಿಸಲಾಗುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಬಹುಮತದಿಂದ ಗೆಲ್ಲಲಿದೆ ಎಂಬುದು ಎಲ್ಲಾ ಪಕ್ಷಗಳಿಗೂ ಸ್ಪಷ್ಟವಾಗಿ ತಿಳಿದಿದೆ. ಹೀಗಾಗಿಯೇ ದೆಹಲಿಯಲ್ಲಿ ಪ್ರತಿಪಕ್ಷಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಹಿಂಸಾಚಾರವನ್ನು ಹರಡುತ್ತಿವೆ. ಇಂದಿಗೂ ಸಹ ದೆಹಲಿಯಲ್ಲಿ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತಲೇ ಇವೇ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ನಿಮ್ಮ ಆರೋಪಗಳಿಗೆ ಯಾವುದೇ ಆಧಾರವಿದೆಯೇ ಎಂದು ಅರವಿಂದ್ ಕೇಜ್ರಿವಾಲ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, 'ಈ ದೇಶದಲ್ಲಿ ಯಾರು ಗಲಭೆಗಳನ್ನು ಮಾಡಬಹುದು ಮತ್ತು ಅದು ಯಾರ ಶಕ್ತಿ ಎಂಬುದು ಎಲ್ಲರಿಗೂ ತಿಳಿದಿದೆ. ಅದನ್ನು ನಾನು ಅದನ್ನು ಹೇಳುವ ಅಗತ್ಯವಿಲ್ಲ' ಎಂದರು.
ಎಎಪಿ ಶಾಸಕ ಅಮಾನುಲ್ಲಾ ಮೇಲಿನ ಗಲಭೆಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ದೆಹಲಿಯಲ್ಲಿ ಯಾರು ಗಲಭೆಗಳನ್ನು ಆಯೋಜಿಸುತ್ತಿದ್ದಾರೆಂದು ಆರೋಪಗಳನ್ನು ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾತ್ರ ತಿಳಿದಿದೆ ಎಂದು ಹೇಳಿದರು.