Viral News: ಕಾರಿನ ಬಾನೆಟ್‌ನಲ್ಲಿ ಕುಳಿತು ಮದುವೆ ಮನೆಗೆ ಸವಾರಿ, ವಧು ವಿರುದ್ಧ ಕೇಸ್..!
ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ವಧು ಮತ್ತು ಕಾರಿನಲ್ಲಿದ್ದ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಹಾರಾಷ್ಟ್ರ: ಮೆರವಣಿಗೆಯ ಮೂಲಕ ಗ್ರ್ಯಾಂಡ್ ಆಗಿ ಎಂಟ್ರಿ ಕೊಡುವವರನ್ನು ನೀವು ನೋಡಿದ್ದಿರಿ. ಆದರೆ ಪುಣೆಯಲ್ಲಿ ಎಸ್‌ಯುವಿ ಕಾರಿನ ಬಾನೆಟ್‌ನಲ್ಲಿ ಕುಳಿತು ವಧು ಮದುವೆ ಮನೆಗೆ ಮೆರವಣಿಗೆ ಹೋಗಿರುವ ಘಟನೆ ನಡೆದಿದೆ.
ಹೌದು, ಕಾರಿನ ಬಾನೆಟ್ ಮೇಲೆ ಕುಳಿತು ಮದುವೆ ಮನೆವರೆಗೂ 23 ವರ್ಷದ ಯುವತಿ ಮೆರವಣಿಗೆ ಹೋಗಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ವಧು ಮತ್ತು ಕಾರಿನಲ್ಲಿದ್ದ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುಣೆ-ಸಾಸ್ವಾಡ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಧುವನ್ನು ಕಾರಿನ ಬಾನೆಟ್ ಮೇಲೆ ಕುರಿಸಿ ಸಾಸ್ವಾಡ್ ನಲ್ಲಿರುವ ಮದುವೆ ಮನೆವರೆಗೂ ಭರ್ಜರಿ ಮೆರವಣಿಗೆ ನಡೆಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ‘ವಧು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಕುಳಿತಿದ್ದರು. ಬೈಕ್ ನಲ್ಲಿ ಕುಳಿತುಕೊಂಡಿದ್ದ ವ್ಯಕ್ತಿಯೊಬ್ಬ ಪುಣೆ-ಸಾಸ್ವಾಡ್(Pune Saswad) ರಸ್ತೆಯುದ್ದಕ್ಕೂ ಪ್ರಯಾಣಿಸಿರುವ ಸನ್ನಿವೇಶವನ್ನು ಚಿತ್ರೀಕರಿಸಿದ್ದಾನೆ.
ಇದನ್ನೂ ಓದಿ: ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ಮಸೂದೆಗೆ ವಿಶ್ವ ಹಿಂದು ಪರಿಷತ್ ವಿರೋಧ
ಕೊರೊನಾ(CoronaVirus) ಸಮಯದಲ್ಲೂ ಯಾರೊಬ್ಬರೂ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ಹೀಗಾಗಿ ವಧು, ಕಾರಿನ ಡ್ರೈವರ್ ಸೇರಿ ಇನ್ನಿತರರ ವಿರುದ್ಧ ಮೋಟಾರು ವಾಹನ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಹೇಳಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ಚಂಡೀಗಢದಲ್ಲಿ ನಡೆದಿದ್ದ ಮದುವೆ ಸಮಾರಂಭದಲ್ಲಿ ಮಾಸ್ಕ್ ಧರಿಸದ ಪಂಜಾಬ್ ನ ವಧುವಿಗೆ ಪೊಲೀಸರು 1 ಸಾವಿರ ರೂ. ದಂಡ ವಿಧಿಸಿದ್ದರು. ಏಕೆ ಮಾಸ್ಕ್ ಹಾಕಿಕೊಂಡಿಲ್ಲವೆಂದು ಪೊಲೀಸರು ಕೇಳಿದ್ದಕ್ಕೆ ‘ದುಬಾರಿ ಮೇಕ್ಅಪ್’ ಮಾಡಿಕೊಂಡಿದ್ದೇನೆಂದು ಆಕೆ ಹೇಳಿದ್ದು ದೊಡ್ಡ ಸುದ್ದಿಯಾಗಿತ್ತು.
ಇದನ್ನೂ ಓದಿ: NEET Exam 2021: ನೀಟ್ ಪರೀಕ್ಷೆ ಸೆಪ್ಟೆಂಬರ್ 12ಕ್ಕೆ ನಿಗದಿ - ಧರ್ಮೇಂದ್ರ ಪ್ರಧಾನ್
ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದರೂ ಕೂಡ ಪ್ರಯೋಜನವಾಗುತ್ತಿಲ್ಲ. ಮದುವೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ(Social Distancing) ಕಾಯ್ದುಕೊಳ್ಳದಿರುವುದು, ಗುಂಪು ಗುಂಪಾಗಿ ಸೇರುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸರು ವಾರ್ನಿಂಗ್ ಮಾಡಿದರೂ ಇಂತಹ ಪ್ರಕರಣಗಳು ಆಗಾಗ ನಡೆಯುತ್ತಲೇ ಇರುತ್ತವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ