Viral Video : ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆ..!
Rat in Food : ಉತ್ತರ ಪ್ರದೇಶದ ರಾಮ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಸಸ್ಯಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾದ ವಿಲಕ್ಷಣ ಘಟನೆ ನಡೆದಿದೆ.
Uttara Pradesh : ಹಾಪುರ್‌ನಲ್ಲಿರುವ ರಾಮ ವೈದ್ಯಕೀಯ ಕಾಲೀಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಹಾರಿ ಸಾಂಬರ್‌ನಲ್ಲಿ ಸತ್ತ ಇಲಿ ಕಾಣಿಸಿಕೊಂಡಿದೆ. ಆ ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿರುವಂತೆ ಸಾಂಬಾರ್‌ನಲ್ಲಿ ಸತ್ತ ಇಲಿ ಇದ್ದು, ಇದನ್ನು ನೋಡಿದ ನೆಟ್ಟಿಗರು ಗರಂ ಆಗಿದ್ದಾರೆ. ಇನ್ನು ಈ ಘಟನೆಯ ವಿಡಿಯೊವೊಂದನ್ನು ಪತ್ರಕರ್ತರೊಬ್ಬರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಸಾಕಷ್ಟು ಕಾಮೆಂಟ್‌ಗಳು ಬಂದಿದ್ದು, ಇದೆಲ್ಲಾ ಬೇಜವಾಬ್ದಾರಿತನ ಎಂದೆಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Opposition Unity: 'ಪ್ರತಿಪಕ್ಷಗಳ ಒಗ್ಗಟ್ಟಿನ ಸಭೆ ಒಂದು ಮದುವೆ ಸಮಾರಂಭವಾಗಿತ್ತು, ಸೌಜನ್ಯಕ್ಕಾಗಿ ಕಾಂಗ್ರೆಸ್ ಭಾಗವಹಿಸಿದೆ'
ಇನ್ನು ಈ ಬಗ್ಗೆ ವಿಡಿಯೋ ಹಂಚಿಕೊಂಡ ಪತ್ರಕರ್ತರು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳ ಗಮನ ಸೆಳೆದಿದ್ದಾರೆ. ವಿಡಿಯೋದಲ್ಲಿ ಸತ್ತ ಇಲಿಯನ್ನು ಹೊರತೆಗೆದಿರುವುದು ಕಂಡುಬಂದಿದೆ.
ಈ ನ್ನು ಈ ಘಟನೆ ನಡೆದ ದಿನದ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ ವಿದ್ಯಾರ್ಥಿಗಳು ಸಹ ಈ ಬಗ್ಗೆ ಯಾವುದೇ ದೂರು ದಾಖಲಿಸಿಲ್ಲ. ಮತ್ತು ಈ ಸಂಬಂಧಿತ ಶಿಕ್ಷಣ ಸಂಸ್ಥೆಯು ಘಟನೆಯ ಕುರಿತು ಯಾವುದೇ ಹೇಳಿಕೆಯನ್ನು ನೀಡಿಲ್ಲ.
ಇದನ್ನೂ ಓದಿ-ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೋ; ತಕ್ಕ ಪಾಠ ಕಲಿಸಿದ 17 ವರ್ಷದ ಬಾಲಕಿ... ವಿಡಿಯೋ ವೈರಲ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.