ನವದೆಹಲಿ : ಗಲ್ಲಿ ಕ್ರಿಕೆಟ್ ಆಟದ ಬಗ್ಗೆ ವ್ಯಕ್ತಿಯೊಬ್ಬರು ಸಂಸ್ಕೃತದಲ್ಲಿ ಕಾಮೆಂಟರಿ ನೀಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಗಮನ ಸೆಳೆದಿದೆ. 


COMMERCIAL BREAK
SCROLL TO CONTINUE READING

ಲಕ್ಷ್ಮೀನಾರಾಯಣ ಬಿಎಸ್‌ ಎಂಬುವರು ತಮ್ಮ ಟ್ವಿಟರ್‌ ಖಾತೆಯಲ್ಲಿ 44 ಸೆಕೆಂಡುಗಳ ಸುದೀರ್ಘ ಕ್ಲಿಪ್‌ನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಯುವಕರ ಗಲ್ಲಿಯಲ್ಲಿ ಕ್ರಿಕೆಟ್ ಆಡುತ್ತಿದೆ, ಅಲ್ಲಿರುವ ವ್ಯಕ್ತಿಯೊಬ್ಬರು ನಿರರ್ಗಳವಾಗಿ ಸಂಸ್ಕೃತದಲ್ಲಿ ಕಾಮೆಂಟ್ ಮಾಡುವುದನ್ನು ಕೇಳಬಹುದು. ಇನ್ನು ವೀಡಿಯೊವನ್ನು 6.5 ಲಕ್ಷಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ ಮತ್ತು 21,000 ಕ್ಕೂ ಹೆಚ್ಚು ಜನರು ಲೈಕ್‌ ಮಾಡಿದ್ದಾರೆ.


ವೈರಲ್ ಆಗಿರುವ ವಿಡಿಯೋ ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆದು ಪ್ರಶಂಸೆಗೆ ಪಾತ್ರವಾಗಿದೆ. ʼಇದು ನೋಡಲು ಹೃದಯವಂತವಾಗಿದೆ... ಈ ಪ್ರಯತ್ನವನ್ನು ಕೈಗೊಂಡವರಿಗೆ ಅಭಿನಂದನೆಗಳುʼ ಎಂದು ಮೋದಿ ಮರುಟ್ವೀಟ್ ಮಾಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.